ಮತದಾರರ ಕರಡು ಪಟ್ಟಿಯಿಂದ ತಮ್ಮ ಹೆಸರು ತೆಗೆದಿರುವುದು ರಾಜಕೀಯ ಪ್ರತೀಕಾರ: ರಾಘವ್ ಚಡ್ಡಾ
ನವದೆಹಲಿ, 03 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ತೆಗೆದುಹಾಕಿರುವುದನ್ನು ಆಮ್ ಆದ್ಮಿ ಪಕ್ಷದ ರಾಜ್ಯ ಸರ್ಕಾರದ ರಾಜಕೀಯ ಪ್ರತೀಕಾರ ಎಂದು ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಆರೋಪಿಸಿದ್ದಾರೆ. ಗುರುವಾರ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಅವರು, ತಾವು
राज्य सभा सांसद राघव चड्ढा


ನವದೆಹಲಿ, 03 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ತೆಗೆದುಹಾಕಿರುವುದನ್ನು ಆಮ್ ಆದ್ಮಿ ಪಕ್ಷದ ರಾಜ್ಯ ಸರ್ಕಾರದ ರಾಜಕೀಯ ಪ್ರತೀಕಾರ ಎಂದು ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಆರೋಪಿಸಿದ್ದಾರೆ.

ಗುರುವಾರ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಅವರು, ತಾವು ಮೊಹಾಲಿಯಲ್ಲಿ ನೋಂದಾಯಿತ ಮತದಾರರಾಗಿದ್ದರೂ ಕರಡು ಪಟ್ಟಿಯಲ್ಲಿ ತಮ್ಮನ್ನು ‘ಸ್ಥಳಾಂತರಗೊಂಡವರು’ ಎಂದು ನಮೂದಿಸಲಾಗಿದೆ ಎಂದು ತಿಳಿಸಿದ್ದಾರೆ. ಸದ್ಯ ಕರಡು ಮತದಾರರ ಪಟ್ಟಿ ಮಾತ್ರ ಪ್ರಕಟವಾಗಿದ್ದು, ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವ ಅವಧಿಯಲ್ಲಿ ಹೆಸರುಗಳನ್ನು ಸರಿಪಡಿಸಲು ಅವಕಾಶವಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಲಭ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ಇದು ಸಾಮಾನ್ಯ ಆಡಳಿತಾತ್ಮಕ ತಪ್ಪಲ್ಲ, ರಾಜಕೀಯ ಸೇಡಿನ ಕ್ರಮವಾಗಿದೆ ಎಂದು ಚಡ್ಡಾ ಆರೋಪಿಸಿದ್ದಾರೆ. ತಮ್ಮನ್ನು ‘ಸ್ಥಳಾಂತರಗೊಂಡವರು’ ಎಂದು ಗುರುತಿಸುವುದರಿಂದ ಹಿಡಿದು ಪರಿಶೀಲನೆ ಹಾಗೂ ಪ್ರಕ್ರಿಯೆ ಪೂರ್ಣಗೊಳಿಸುವವರೆಗೆ ಪಂಜಾಬ್ ಸರ್ಕಾರದ ಅಧಿಕಾರಿಗಳ ಪಾತ್ರವಿದೆ ಎಂದು ದೂರಿದ್ದಾರೆ.

ಬೂತ್ ಮಟ್ಟದ ಅಧಿಕಾರಿಯಿಂದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಚುನಾವಣಾಧಿಕಾರಿವರೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ. ಹೀಗಾಗಿ ಅವರ ಮೇಲೆ ಸರ್ಕಾರ ರಾಜಕೀಯ ಒತ್ತಡ ಹೇರಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷ ತೊರೆದ ಬಳಿಕ ಪಕ್ಷದ ನಾಯಕತ್ವ ತಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಪಿಸಿರುವ ಚಡ್ಡಾ, ಪಕ್ಷ ತೊರೆದು ಬಿಜೆಪಿಗೆ ಸೇರಿದ ಇತರ ಸಂಸದರೂ ಇದೇ ರೀತಿಯ ಗುರಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ ಮಾರ್ಗಸೂಚಿಯ ನಿಯಮವನ್ನು ಉಲ್ಲೇಖಿಸಿದ ಅವರು, ಸಂಸದರು, ಶಾಸಕರು, ನ್ಯಾಯಾಂಗದ ಸದಸ್ಯರು ಹಾಗೂ ಇತರ ಸಾರ್ವಜನಿಕ ವ್ಯಕ್ತಿಗಳ ಹೆಸರುಗಳನ್ನು ಗುರುತಿಸಲಾಗಿದ್ದರೂ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವ ಅವಧಿಗಾಗಿ ಕರಡು ಮತದಾರರ ಪಟ್ಟಿಯಲ್ಲಿ ಉಳಿಸಬೇಕು ಎಂದು ತಿಳಿಸಿದ್ದಾರೆ.

ತಾವು ಪಂಜಾಬ್‌ನ ಹಾಲಿ ರಾಜ್ಯಸಭಾ ಸದಸ್ಯರಾಗಿದ್ದರೂ ಈ ನಿಯಮ ಪಾಲಿಸಲಾಗಿಲ್ಲ. ಚುನಾವಣಾ ಆಯೋಗದ ನಿರ್ದೇಶನಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದ ಅವರು, ಪಂಜಾಬ್‌ನ ಕರಡು ಮತದಾರರ ಪಟ್ಟಿ ಯಾವುದೇ ರಾಜಕೀಯ ಪಕ್ಷದ ಖಾಸಗಿ ಆಸ್ತಿಯಲ್ಲ ಎಂದು ಹೇಳಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande