

ಬಳ್ಳಾರಿ, 03 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 04 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕರಾದ ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಗೊಲ್ಲರ ಸಂಘದ ಗೌರವಾಧ್ಯಕ್ಷ ಪಿ.ತಿಮ್ಮಪ್ಪ ಯಾದವ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಆಲಂಬಾಷ ಅವರು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ವೈ.ಬಸವರಾಜ ತಂಡದಿ0ದ ಸಮೂಹ ನೃತ್ಯ ಇರಲಿದೆ.
*ಮೆರವಣಿಗೆ:*
ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 09.30 ಗಂಟೆಗೆ ನಗರದ ಮುನ್ಸಿಪಾಲ್ ಕಾಲೇಜು ಆವರಣದಿಂದ ಮೆರವಣಿಗೆ ಪ್ರಾರಂಭವಾಗಿ ಇಂದಿರಾ ವೃತ್ತ, ಗಡಿಗಿ ಚನ್ನಪ್ಪ ವೃತ್ತ, ಹಳೇ ಜಿಲ್ಲಾಧಿಕಾರಿಗಳ ಕಾರ್ಯಾಲಯ ರಸ್ತೆ ಮೂಲಕ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದ ವೇದಿಕೆ ಸಭಾಂಗಣದವರೆಗೆ ತಲುಪಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೆರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್