
ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.)
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ”, ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು “ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್