
ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.):
ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ನಡೆದ ಮಾರಾಮಾರಿ ವಿಕೋಪಕ್ಕೆ ತಿರುಗಿ, ಓರ್ವ ವಿದ್ಯಾರ್ಥಿ ಹತ್ಯೆಯಾಗಿರುವ ಘಟನೆ ನಡೆದಿದೆ. ಘಟನೆಯಿಂದ ಸ್ಥಳೀಯವಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಿದ್ಯಾರ್ಥಿಗಳ ಗುಂಪುಗಳ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಆರಂಭವಾಗಿದ್ದು, ಬಳಿಕ ಮಾರಾಮಾರಿ ನಡೆದಿದೆ ಎನ್ನಲಾಗಿದೆ.
ಈ ವೇಳೆ ಓರ್ವ ವಿದ್ಯಾರ್ಥಿಗೆ ಗಂಭೀರವಾಗಿ ಹಲ್ಲೆ ನಡೆದಿದ್ದು, ಆತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಘಟನೆಯ ನಿಖರ ಕಾರಣ ಹಾಗೂ ಮೃತ ವಿದ್ಯಾರ್ಥಿಯ ಗುರುತು ಸೇರಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಾರಾಮಾರಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳು ಹಾಗೂ ಇತರರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದು,
ಘಟನೆಯ ಹಿನ್ನೆಲೆ ಮತ್ತು ಹತ್ಯೆಗೆ ಕಾರಣವೇನು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R