ಬೆಂಗಳೂರಿನಲ್ಲಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸ್ಫೋಟ; ಶಾಲೆ ಕಿಟಕಿಗೆ ಬಿದ್ದ ಸಿಲಿಂಡರ್
ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ನಾಲ್ಕು ಸಿಲಿಂಡರ್ಗಳು ಸ್ಫೋಟಗೊಂಡಿವೆ. ಸ್ಫೋಟದ ರಭಸಕ್ಕೆ ಸಿಲಿಂಡರ್ವೊಂದು ಶಾಲೆಯ ಕಿಟಕಿಗೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Bengaluru-gas-refilling-explosion-four-cylinders-blast-Baiyappanahalli


ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.):

ಗ್ಯಾಸ್ ಸಿಲಿಂಡರ್ಗಳನ್ನು ರೀಫಿಲ್ಲಿಂಗ್ ಮಾಡುತ್ತಿದ್ದ ವೇಳೆ ನಾಲ್ಕು ಸಿಲಿಂಡರ್ಗಳು ಸ್ಫೋಟಗೊಂಡ ಘಟನೆ ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರೀಫಿಲ್ಲಿಂಗ್ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ಸಿಲಿಂಡರ್ ಒಂದು ಸಮೀಪದ ಶಾಲೆಯ ಕಿಟಕಿಗೆ ಬಿದ್ದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

“ರೀಫಿಲ್ಲಿಂಗ್ ವೇಳೆ ನಾಲ್ಕು ಸಿಲಿಂಡರ್ಗಳು ಸ್ಫೋಟಗೊಂಡಿವೆ. ಸ್ಫೋಟದ ರಭಸಕ್ಕೆ ಸಿಲಿಂಡರ್ವೊಂದು ಶಾಲೆಯ ಕಿಟಕಿಗೆ ಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,” ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande