ಯಾದವಾಡ–ಮುಧೋಳ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಬಸ್, ೧೪ ಮಂದಿಗೆ ಗಾಯ
ಬಾಗಲಕೋಟೆ, 30 ಸೆಪ್ಟೆಂಬರ್ (ಹಿ.ಸ.) ಬಾಗಲಕೋಟೆ ಜಿಲ್ಲೆಯ ಯಾದವಾಡ–ಮುಧೋಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ ಪರಿಣಾಮ 14 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮುಧೋಳ ನಗರದ ಹೊರವಲಯದಲ್ಲಿರುವ ಐಸಿಪಿಎಲ್
ಅಪಘಾತ


ಬಾಗಲಕೋಟೆ, 30 ಸೆಪ್ಟೆಂಬರ್ (ಹಿ.ಸ.)

ಬಾಗಲಕೋಟೆ ಜಿಲ್ಲೆಯ

ಯಾದವಾಡ–ಮುಧೋಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ ಪರಿಣಾಮ 14 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಮುಧೋಳ ನಗರದ ಹೊರವಲಯದಲ್ಲಿರುವ ಐಸಿಪಿಎಲ್ ಕಾರ್ಖಾನೆ ಬಳಿಯ, ನಗರಸಭೆಯ ತ್ಯಾಜ್ಯ ಸಂಸ್ಕರಣ ಘಟಕದ ಸಮೀಪ ಈ ಅವಘಡ ಸಂಭವಿಸಿದೆ. ಯಾದವಾಡ ಕಡೆಯಿಂದ ಮುಧೋಳದತ್ತ ಸಂಚರಿಸುತ್ತಿದ್ದ ಬಸ್ ರಸ್ತೆ ಮೇಲೆ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆ ಬದಿಗೆ ಇಳಿದು ಜಮೀನಿನೊಳಗೆ ನುಗ್ಗಿದೆ ಎಂದು ತಿಳಿದುಬಂದಿದೆ.

ಅವಘಡದ ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ 14 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ಬಸ್ನಿಂದ ಹೊರತೆಗೆದು ನೆರವಾದರು.

ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಮುಧೋಳದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡಿದ್ದು, ಬಹುತೇಕ ಗಾಯಗಳು ಸಣ್ಣಪುಟ್ಟವಾಗಿವೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಪ್ರತ್ಯಕ್ಷದರ್ಶಿ ಜ್ಯೋತಿ ಮಂಡರಗಿ ಮಾತನಾಡಿ, ಬೆಳಗಿನ ಸಮಯದಲ್ಲಿ ಯಾದವಾಡ–ಮುಧೋಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ್ದು, ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿಸಿದ್ದಾರೆ.

ಅವಘಡದಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಬಸ್ ಜಮೀನಿಗೆ ನುಗ್ಗಿದ ಪರಿಣಾಮ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande