ಬಳ್ಳಾರಿ : ವಿದ್ಯಾರ್ಥಿನಿಲಯಗಳಿಗೆ ಬಾಡಿಗೆ ಕಟ್ಟಡ ಬೇಕಾಗಿದೆ
ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.) ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ನಿಲಯ (ನಂ. 01) ಕ್ಕೆ ಹೆಚ್ಚುವರಿ ಕಟ್ಟಡ ಹಾಗೂ ಪ್ರಸ್ತುತ ಶಿಥಿಲಾವಸ್ಥೆಯಲ್ಲ
ಬಳ್ಳಾರಿ : ವಿದ್ಯಾರ್ಥಿನಿಲಯಗಳಿಗೆ ಬಾಡಿಗೆ ಕಟ್ಟಡ ಬೇಕಾಗಿದೆ


ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.)

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ನಿಲಯ (ನಂ. 01) ಕ್ಕೆ ಹೆಚ್ಚುವರಿ ಕಟ್ಟಡ ಹಾಗೂ ಪ್ರಸ್ತುತ ಶಿಥಿಲಾವಸ್ಥೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಹೊಸದಾಗಿ ಬಾಡಿಗೆ ಕಟ್ಟಡದ ಅಗತ್ಯವಿದೆ.

ಮೆಟ್ರಿಕ್ ನಂತರದ ಬಾಲಕಿಯರ ನಿಲಯಕ್ಕೆ ಹೆಚ್ಚುವರಿಯಾಗಿ 100 ವಿದ್ಯಾರ್ಥಿನಿಯರ ವಾಸ್ತವ್ಯಕ್ಕೆ ಅನುಕೂಲಕರವಾಗಿರುವ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ವಿದ್ಯಾರ್ಥಿಗಳ ವಾಸಕ್ಕೆ ಯೋಗ್ಯವಾಗಿರುವ ಬಾಡಿಗೆ ಕಟ್ಟಡವನ್ನು ಒದಗಿಸಲು ಆಸಕ್ತ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮಾಲೀಕರು ಕಟ್ಟಡದ ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 10 ರೊಳಗೆ ಕಚೇರಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೋಟೆ, ಬಳ್ಳಾರಿ–583101 (ದೂರವಾಣಿ: 9480843023) ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಕೌಲ್ ಬಜಾರ್ 1ನೇ ಗೇಟ್ ಹತ್ತಿರ, ಡಾ. ಬಿ.ಆರ್. ಅಂಬೇಡ್ಕರ್ ಭವನ, ಬಳ್ಳಾರಿ- 583101 (ದೂರವಾಣಿ: 9480843073) ಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande