
ನವದೆಹಲಿ, ಸೆಪ್ಟೆಂಬರ್ 30:
ಕರ್ತವ್ಯಗಳತ್ತ ಸಮರ್ಪಣೆ ಮತ್ತು ಪ್ರಾಮಾಣಿಕತೆಯ ಮಹತ್ವವನ್ನು ಒತ್ತಿಹೇಳಿರುವ ಪ್ರಧಾನಿ ನರೇಂದ್ರ ಮೋದಿ, ವ್ಯಕ್ತಿಯು ತನ್ನ ನಿಗದಿತ ಕರ್ತವ್ಯಗಳನ್ನು ಶ್ರದ್ಧೆ ಮತ್ತು ನಿಷ್ಠೆಯಿಂದ ನಿರ್ವಹಿಸುವ ಮೂಲಕ ಪರಮ ಸಾಧನೆಯನ್ನು ಪಡೆಯಬಹುದು ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಬುಧವಾರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂಸ್ಕೃತದ ಸುಭಾಷಿತವೊಂದನ್ನು ಹಂಚಿಕೊಂಡಿದ್ದಾರೆ.
“ಸ್ವೇ ಸ್ವೇ ಕರ್ಮಣ್ಯಭಿರತಃ ಸಂಸಿದ್ಧಿಂ ಲಭತೇ ನರಃ।
ಸ್ವಕರ್ಮನಿರತಃ ಸಿದ್ಧಿಂ ಯಥಾ ವಿಂದತಿ ತಚ್ಛೃಣು॥”
ಎಂಬ ಸುಭಾಷಿತವನ್ನು ಅವರು ಹಂಚಿಕೊಂಡಿದ್ದಾರೆ.
ತಮ್ಮ ತಮ್ಮ ಕರ್ತವ್ಯಗಳಲ್ಲಿ ಸಮರ್ಪಿತರಾಗಿ ತೊಡಗಿಸಿಕೊಂಡಿರುವ ವ್ಯಕ್ತಿ ಪರಮ ಸಾಧನೆಯನ್ನು ಪಡೆಯುತ್ತಾನೆ ಎಂಬುದು ಈ ಸುಭಾಷಿತದ ಭಾವಾರ್ಥವಾಗಿದೆ. ತನ್ನ ಕರ್ಮದತ್ತ ನಿಷ್ಠೆ ಮತ್ತು ಶ್ರದ್ಧೆಯಿಂದ ತೊಡಗಿಸಿಕೊಳ್ಳುವುದೇ ಯಶಸ್ಸಿಗೆ ಆಧಾರ ಎಂಬ ಸಂದೇಶವನ್ನು ಇದರಲ್ಲಿ ನೀಡಲಾಗಿದೆ.
ವ್ಯಕ್ತಿಯು ತನ್ನ ನಿಗದಿತ ಕರ್ತವ್ಯಗಳನ್ನು ಪ್ರಾಮಾಣಿಕತೆ ಮತ್ತು ಸಂಪೂರ್ಣ ನಿಷ್ಠೆಯಿಂದ ನಿರ್ವಹಿಸಬೇಕು. ಸಮರ್ಪಣಾ ಮನೋಭಾವದಿಂದ ಕೈಗೊಳ್ಳುವ ಕರ್ಮದ ಮೂಲಕ ಜೀವನದಲ್ಲಿ ಉನ್ನತ ಸಾಧನೆಗಳನ್ನು ಪಡೆಯಬಹುದು ಎಂಬ ಸಂದೇಶವನ್ನು ಸುಭಾಷಿತದ ಮೂಲಕ ಪ್ರಧಾನಿ ಮೋದಿ ನೀಡಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.