ಸ್ವಚ್ಛತಾ ಹೀ ಸೇವಾ: ಸಫಾಯಿ ಮಿತ್ರರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ
ಕುರುಗೋಡು, 30 ಸೆಪ್ಟೆಂಬರ್ (ಹಿ.ಸ.) ಪೌರಕಾರ್ಮಿಕರ ಕ್ಷೇಮಾಭಿವೃದ್ಧಿ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ನಮಸ್ತೆ’ ಯೋಜನೆಯನ್ನು ಕುರುಗೋಡು ಪಟ್ಟಣದಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುಚಂತೆ ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟ
‘ಸ್ವಚ್ಛತಾ ಹೀ ಸೇವಾ’: ಸಫಾಯಿ ಮಿತ್ರರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ


‘ಸ್ವಚ್ಛತಾ ಹೀ ಸೇವಾ’: ಸಫಾಯಿ ಮಿತ್ರರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ


ಕುರುಗೋಡು, 30 ಸೆಪ್ಟೆಂಬರ್ (ಹಿ.ಸ.)

ಪೌರಕಾರ್ಮಿಕರ ಕ್ಷೇಮಾಭಿವೃದ್ಧಿ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ನಮಸ್ತೆ’ ಯೋಜನೆಯನ್ನು ಕುರುಗೋಡು ಪಟ್ಟಣದಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುಚಂತೆ ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಪುರಸಭೆಯ ಸಭಾಂಗಣದಲ್ಲಿ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನಮಸ್ತೆ’ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರು ಹಾಗೂ ತ್ಯಾಜ್ಯ ಆಯುವವರಿಗೆ ಅಧಿಕೃತ ಗುರುತಿನ ಚೀಟಿ ಮತ್ತು ಸರ್ಕಾರದ ಸುರಕ್ಷತಾ ಸೌಲಭ್ಯಗಳನ್ನು ತಲುಪಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕು ಎಂದರು.

ಪ್ರತಿಯೊಬ್ಬ ನೈರ್ಮಲ್ಯ ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಗುಣಮಟ್ಟದ ಸುರಕ್ಷತಾ ಕವಚಗಳನ್ನು ವಿತರಿಸಬೇಕು ಹಾಗೂ ಅವರ ನಿಯಮಿತ ಆರೋಗ್ಯ ತಪಾಸಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.

ಈ ಎಲ್ಲಾ ಅಂಶಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಸಂಬ0ಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಸೂಚಿಸಿದರು.

‘ನಮಸ್ತೆ’ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರು ಹಾಗೂ ತ್ಯಾಜ್ಯ ಆಯುವವರಿಗೆ ಅಧಿಕೃತ ಗುರುತಿನ ಚೀಟಿ ವಿತರಣೆ ಮಾಡಲಾಯಿತು.

ಸಭೆಯಲ್ಲಿ ಕಿರಿಯ ಅಭಿಯಂತರರಾದ ಮೇಘನಾ ಸೇರಿದಂತೆ ಆರೋಗ್ಯ ಶಾಖೆಯ ಸಿಬ್ಬಂದಿ ವರ್ಗದವರು ಹಾಗೂ ಇತರರು ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande