ಗಾಂಧಿ ಜಯಂತಿ: ಜಿಬಿಎ ವ್ಯಾಪ್ತಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆಗೆ ನಿಷೇಧ
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಹಾಗೂ ಮಾಂಸದ ಅಂಗಡಿಗಳಲ್ಲಿ ಮಾಂಸ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ.
gandhi-jayanti-2026-ban-on-animal-slaughter-and-meat-sale-across-gba


ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.):

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ಶುಕ್ರವಾರ, ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ.

ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಗಳು ಹಾಗೂ ಮಾಂಸದ ಅಂಗಡಿಗಳಲ್ಲಿ ಅಂದು ಪ್ರಾಣಿಗಳ ವಧೆ ನಡೆಸುವುದನ್ನು ಮತ್ತು ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಹಿಂಸೆ ಹಾಗೂ ಪ್ರಾಣಿ ಹಿಂಸೆಯನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ವ್ಯಾಪ್ತಿಯಲ್ಲಿರುವ ಎಲ್ಲ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳಿಗೆ ಈ ನಿಷೇಧ ಅನ್ವಯವಾಗಲಿದ್ದು ಎಲ್ಲರೂ ಆದೇಶವನ್ನು ಪಾಲಿಸಬೇಕು” ಎಂದು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande