
ಬಡ್ಗಾಮ್, 04 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಜಮ್ಮು-ಕಾಶ್ಮೀರದ ಬಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಗುರುವಾರ ಸಂಜೆ ಉಗ್ರರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಸಿಆರ್ಪಿಎಫ್ ಜಂಟಿಯಾಗಿ ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಭೀಕರ ಗುಂಡಿನ ಚಕಮಕಿ ನಡೆದಿದೆ.
ರಾತ್ರಿ ವೇಳೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಶುಕ್ರವಾರ ಬೆಳಗ್ಗೆ ಮತ್ತೆ ಮುಂದುವರಿಸಲಾಯಿತು. ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದು, ಸ್ಥಳದಿಂದ ಎಕೆ ರೈಫಲ್ ಸೇರಿದಂತೆ ಯುದ್ಧೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರದೇಶದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.