ನಾಳೆ ಬಂಜಾರ ಬುಡಕಟ್ಟು ಜನಪದ ಕಥೆಗಳು ಕೃತಿ ಬಿಡುಗಡೆ
ಬಳ್ಳಾರಿ, 04 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಪ್ರೊ.ಶಿರಗಾನಹಳ್ಳಿ ಶಾಂತಾ ನಾಯಕ್ ಅವರ `ಬಂಜಾರ ಬುಡಕಟ್ಟು ಜನಪದ ಕಥೆಗಳು’ ಕೃತಿ ಲೋಕಾರ್ಪಣೆ ಹಾಗೂ ಶಿಕ್ಷಕರ ದಿನಾಚರಣೆಯು ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಆಡಿಟೋರಿಯಂನಲ್ಲಿ ಸೆಪ್ಟಂಬರ್ 5ರ ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಬಳ್ಳಾರಿ
ಬಳ್ಳಾರಿ : `ಬಂಜಾರ ಬುಡಕಟ್ಟು ಜನಪದ ಕಥೆಗಳು' ಶನಿವಾರ ಬಿಡುಗಡೆ


ಬಳ್ಳಾರಿ : `ಬಂಜಾರ ಬುಡಕಟ್ಟು ಜನಪದ ಕಥೆಗಳು' ಶನಿವಾರ ಬಿಡುಗಡೆ


ಬಳ್ಳಾರಿ, 04 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಪ್ರೊ.ಶಿರಗಾನಹಳ್ಳಿ ಶಾಂತಾ ನಾಯಕ್ ಅವರ `ಬಂಜಾರ ಬುಡಕಟ್ಟು ಜನಪದ ಕಥೆಗಳು’ ಕೃತಿ ಲೋಕಾರ್ಪಣೆ ಹಾಗೂ ಶಿಕ್ಷಕರ

ದಿನಾಚರಣೆಯು ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಆಡಿಟೋರಿಯಂನಲ್ಲಿ ಸೆಪ್ಟಂಬರ್ 5ರ ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಬಳ್ಳಾರಿ ತಾಲ್ಲೂಕಿನ ಡಿ.ಕಗ್ಗಲ್ ಗ್ರಾಮದ ರಂಗಜಂಗಮ ಸಂಸ್ಥೆ (ರಿ) ಹಾಗೂ ನಗರದ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ

ಸಂಯುಕ್ತಾಶ್ರಯದಲ್ಲಿ ನಡೆಯುವ ಕಾರ್ಯಕ್ರಮವನ್ನು ವಾಣಿಜ್ಯ ತೆರಿಗೆ ಇಲಾಖೆ ಕಲಬುರ್ಗಿ ವಿಭಾಗದ ಆಯುಕ್ತ ಡಾ. ಕುಮಾರ್ನಾಯಕ್ ಅವರು ಉದ್ಘಾಟಿಸಲಿದ್ದಾರೆ.

ಹಿರಿಯ ಪತ್ರಕರ್ತರಾದ ರವೀಂದ್ರ ಭಟ್ಟ ಅವರು ಪುಸ್ತಕವನ್ನು ಲೋಕಾರ್ಪಣೆ ಮಾಡುವರು. ಶ್ರೀ ಸತ್ಯಂ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ. ವೀರಭದ್ರಪ್ಪ ಹೆಚ್. ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಬಂಜಾರ ಬುಡಕಟ್ಟು ಜನಪದ ಕಥೆಗಳು ಕೃತಿಯ ಕುರಿತು ಅಖಿಲ ಭಾರತ ಶರಣಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾಧ್ಯಕ್ಷರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಖಂಡ ಬಳ್ಳಾರಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಸಿದ್ದರಾಮ ಕಲ್ಮಠ ಅವರು

ಮಾತನಾಡುವರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿದೇರ್ಶಕ ಬಿ.ನಾಗರಾಜ್, ಬೆಂಗಳೂರಿನ ಸಂತ ಕವಿ ಕನಕದಾಸ ತತ್ವಪದ ಅಧ್ಯಯನ ಕೇಂದ್ರದ ಸದಸ್ಯರು ಹಾಗೂ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಾಟಕ ವಿಭಾಗದ ಮುಖ್ಯಸ್ಥ ಡಾ. ದಸ್ತಗೀರ್ ಸಾಬ್ ದಿನ್ನಿ ಅವರು ಮುಖ್ಯ ಅತಿಥಿಗಳಾಗಿದ್ದಾರೆ.

ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರೊ.ಶಿರಗಾನಹಳ್ಳಿ ಶಾಂತಾನಾಯಕರಿಗೆ ಗೌರವ ಪುರಸ್ಕಾರ ನೀಡಿ, ಸನ್ಮಾನಿಸಿ, ಸತ್ಕರಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕøತಿಕ ಕಾರ್ಯಕ್ರಮಗಳು, ರಂಗ ಗೀತೆಗಳ ಗಾಯನ, ಜಾನಪದ ಗೀತೆಗಳ ಗಾಯನ, ಸುಗಮ ಸಂಗೀತ, ಸೇರಿದಂತೆ ಇತರೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.

ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂ ಭಾಷ ಅವರು ಕಾರ್ಯಕ್ರಮ ನಿರೂಪಿಸುವವರು. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರದರ್ಶನ ಕಲೆ, ನಾಟಕ ವಿಭಾಗದ ಉಪನ್ಯಾಸಕ ಡಾ. ಅಣ್ಣಾಜಿ ಕೃಷ್ಣಾರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande