ದೇಶಾದ್ಯಂತ ಮುಂದಿನ 5ರಿಂದ 7 ದಿನ ಭಾರಿ ಮಳೆ ಮುನ್ಸೂಚನೆ
ನವದೆಹಲಿ, 04 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶದ ವಾಯವ್ಯ ಭಾಗದಿಂದ ದಕ್ಷಿಣ ಪರ್ಯಾಯ ದ್ವೀಪ ಪ್ರದೇಶಗಳವರೆಗೆ ಮುಂದಿನ 5ರಿಂದ 7 ದಿನಗಳ ಕಾಲ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದೆಹಲಿ-ಎನ್‌ಸಿಆರ್‌ನಲ್ಲೂ ಮುಂದಿನ ಮೂರು ದಿನಗಳ ಕಾಲ
प्रतीकात्मक


ನವದೆಹಲಿ, 04 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ದೇಶದ ವಾಯವ್ಯ ಭಾಗದಿಂದ ದಕ್ಷಿಣ ಪರ್ಯಾಯ ದ್ವೀಪ ಪ್ರದೇಶಗಳವರೆಗೆ ಮುಂದಿನ 5ರಿಂದ 7 ದಿನಗಳ ಕಾಲ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ದೆಹಲಿ-ಎನ್‌ಸಿಆರ್‌ನಲ್ಲೂ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶನಿವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮಧ್ಯಾಹ್ನದಿಂದ ಸಂಜೆವರೆಗೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಮಧ್ಯಪ್ರದೇಶ ಹಾಗೂ ದಕ್ಷಿಣ ಉತ್ತರ ಪ್ರದೇಶದ ಮೇಲಿರುವ ಸುಸ್ಪಷ್ಟ ಕಡಿಮೆ ಒತ್ತಡದ ಪ್ರದೇಶದ ಪರಿಣಾಮ ಸೆ.5ರಂದು ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಸೆ.5ರಿಂದ 8ರವರೆಗೆ ಪೂರ್ವ ಮಧ್ಯಪ್ರದೇಶ, ಸೆ.6ರಂದು ಪಶ್ಚಿಮ ಮಧ್ಯಪ್ರದೇಶದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಪೂರ್ವ ಭಾರತದಲ್ಲಿ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್ ಮತ್ತು ಒಡಿಶಾದ ಕೆಲವು ಭಾಗಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಈಶಾನ್ಯ ಭಾರತ, ಪಶ್ಚಿಮ ಭಾರತ ಹಾಗೂ ದಕ್ಷಿಣ ಪರ್ಯಾಯ ದ್ವೀಪ ಪ್ರದೇಶಗಳಲ್ಲೂ ಮುಂದಿನ 6ರಿಂದ 7 ದಿನಗಳಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಲವು ಪ್ರದೇಶಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande