ಈಒಎಸ್-05 ಯಶಸ್ವಿ ಉಡಾವಣೆ: ಇಸ್ರೋಗೆ ಪ್ರಧಾನಿ ಮೋದಿ, ರಾಜನಾಥ್ ಸಿಂಗ್ ಸೇರಿದಂತೆ ಗಣ್ಯರ ಅಭಿನಂದನೆ
ನವದೆಹಲಿ, 04 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶದ ಮೊದಲ ಭೂ ವೀಕ್ಷಣಾ ಉಪಗ್ರಹ ಈಒಎಸ್‌-05 ಅನ್ನು ಜಿಯೋಸಿಂಕ್ರೋನಸ್ ಕಕ್ಷೆಗೆ ಯಶಸ್ವಿಯಾಗಿ ಉಡಾವಣೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಕೇಂದ್ರ ಸಚಿವ
इमेजिंग सैटेलाइट


ನವದೆಹಲಿ, 04 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ದೇಶದ ಮೊದಲ ಭೂ ವೀಕ್ಷಣಾ ಉಪಗ್ರಹ ಈಒಎಸ್‌-05 ಅನ್ನು ಜಿಯೋಸಿಂಕ್ರೋನಸ್ ಕಕ್ಷೆಗೆ ಯಶಸ್ವಿಯಾಗಿ ಉಡಾವಣೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಕೇಂದ್ರ ಸಚಿವರು ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಂದು ಬೆಳಗ್ಗೆ ಜಿಎಸ್‌ಎಲ್‌ವಿ-ಎಫ್17 ರಾಕೆಟ್ ಮೂಲಕ ಈಒಎಸ್‌-05 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಸುಮಾರು 36 ಸಾವಿರ ಕಿಲೋಮೀಟರ್ ಎತ್ತರದ ಜಿಯೋಸಿಂಕ್ರೋನಸ್ ಕಕ್ಷೆಗೆ ಉಪಗ್ರಹವನ್ನು ರಾಕೆಟ್ ತಲುಪಿಸಿದೆ.

ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿ, ಇದು ದೇಶಕ್ಕೆ ಹೆಮ್ಮೆಯ ಕ್ಷಣವಾಗಿದ್ದು, ಭಾರತದ ಬಾಹ್ಯಾಕಾಶ ಕ್ಷೇತ್ರದ ಶ್ರೇಷ್ಠತೆ, ನವೀನತೆ ಹಾಗೂ ಹೆಚ್ಚುತ್ತಿರುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಇಸ್ರೋ ಮತ್ತು ಭಾರತೀಯ ಉದ್ಯಮಗಳ ನಡುವಿನ ಹೆಚ್ಚುತ್ತಿರುವ ಸಹಭಾಗಿತ್ವವು ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಮತ್ತಷ್ಟು ಬಲ ನೀಡುತ್ತಿದೆ ಎಂದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈಒಎಸ್‌-05 ಉಪಗ್ರಹವು ಭಾರತದ ಭೂ ವೀಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸಚಿವರಾದ ಜಿತೇಂದ್ರ ಸಿಂಗ್, ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಇಸ್ರೋ ತಂಡದ ಸಾಧನೆಯನ್ನು ಶ್ಲಾಘಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಈ ಸಾಧನೆಯು ಭಾರತದ ಭೂಮಿಯನ್ನು ವೀಕ್ಷಿಸಿ ಅರ್ಥೈಸಿಕೊಳ್ಳುವ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಹೇಳಿ, ವಿಜ್ಞಾನಿಗಳು, ಬಾಹ್ಯಾಕಾಶ ಎಂಜಿನಿಯರ್‌ಗಳು ಹಾಗೂ ಸಂಶೋಧಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande