ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಗವಾನ್ ಶ್ರೀಕೃಷ್ಣನ ಸ್ತುತಿ
ನವದೆಹಲಿ, 04 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಭಗವಾನ್ ಶ್ರೀಕೃಷ್ಣನನ್ನು ಸ್ತುತಿಸಿ ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಂಸ್ಕೃತದ ಶ್ಲೋಕವನ್ನು ಹಂಚಿಕೊಂಡು, “ವಸು
प्रधानमंत्री नरेन्द्र मोदी (फाइल फोटो)


ನವದೆಹಲಿ, 04 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಭಗವಾನ್ ಶ್ರೀಕೃಷ್ಣನನ್ನು ಸ್ತುತಿಸಿ ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಂಸ್ಕೃತದ ಶ್ಲೋಕವನ್ನು ಹಂಚಿಕೊಂಡು, “ವಸುದೇವಸುತಂ ದೇವಂ ಕಂಸಚಾಣೂರಮರ್ದನಮ್ । ದೇವಕೀಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್॥” ಎಂದು ಬರೆದಿದ್ದಾರೆ.

ಇದರ ಅರ್ಥವನ್ನು ವಿವರಿಸಿರುವ ಪ್ರಧಾನಿ, ವಸುದೇವನ ಪುತ್ರ, ದೇವಸ್ವರೂಪಿ, ಕಂಸ ಮತ್ತು ಚಾಣೂರರನ್ನು ಸಂಹರಿಸಿದ, ತಾಯಿ ದೇವಕಿಗೆ ಪರಮಾನಂದವನ್ನು ನೀಡಿದ ಜಗದ್ಗುರು ಭಗವಾನ್ ಶ್ರೀಕೃಷ್ಣನಿಗೆ ತಾನು ವಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಶ್ರೀಕೃಷ್ಣ ಜನ್ಮಾಷ್ಟಮಿಯ ಪವಿತ್ರ ಸಂದರ್ಭದಲ್ಲಿ ಪ್ರಧಾನಿ ಅವರು ಶ್ರೀಕೃಷ್ಣನ ಮಹಿಮೆಯನ್ನು ಸ್ಮರಿಸಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande