
ಬಾಗಲಕೋಟೆ, 04 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಧಾರ್ಮಿಕ ಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀಕೃಷ್ಣನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ನೆರವೇರಿಸಲಾಯಿತು. ಶ್ರೀಕೃಷ್ಣನಿಗೆ ಪೂಜೆ ಸಲ್ಲಿಸುವ ಮೂಲಕ ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು.
ಶ್ರೀಕೃಷ್ಣ ಜನ್ಮಾಷ್ಟಮಿ ಹಿಂದೂ ಧರ್ಮದ ಪ್ರಮುಖ ಧಾರ್ಮಿಕ ಹಬ್ಬಗಳಲ್ಲಿ ಒಂದಾಗಿದ್ದು, ಭಗವಾನ್ ಶ್ರೀಕೃಷ್ಣನ ಜನ್ಮದಿನವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಯಲ್ಲಿಯೂ ಹಬ್ಬದ ಸಡಗರ ಕಂಡುಬಂದಿತು. ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗ್ರೇಡ್–2 ಎ.ಕೆ. ಇಂಡಿಕರ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ. ಮುಲ್ಲಾ, ರೇಷ್ಮೆ ಅಧಿಕಾರಿ ರಮೇಶ ನಿಡೋನಿ, ಕಂದಾಯ ನಿರೀಕ್ಷಕ ಸತೀಶ ಬೇವೂರ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು.
ಸರ್ಕಾರಿ ಕಚೇರಿಯಲ್ಲಿ ನಡೆದ ಸರಳ ಹಾಗೂ ಅರ್ಥಪೂರ್ಣ ಜನ್ಮಾಷ್ಟಮಿ ಆಚರಣೆಯು ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಧಾರ್ಮಿಕ ಭಾವನೆ ಮೂಡಿಸುವುದರೊಂದಿಗೆ ಪರಸ್ಪರ ಸೌಹಾರ್ದತೆ ಹಾಗೂ ಒಗ್ಗಟ್ಟಿನ ಸಂದೇಶ ಸಾರಿತು ಎಂದು ತಹಶೀಲ್ದಾರ್ ಇಂಡಿಕರ್ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande