ಕೋಲಾರದ ಕಿಲಾರಿಪೇಟೆಯಲ್ಲಿ ಸಂಭ್ರಮದ ಶ್ರೀಕೃಷ್ಣಜನ್ಮಾಷ್ಟಮಿ
ಕೋಲಾರದ ಕಿಲಾರಿಪೇಟೆಯಲ್ಲಿ ಸಂಭ್ರಮದ ಶ್ರೀಕೃಷ್ಣಜನ್ಮಾಷ್ಟಮಿ
ಕೋಲಾರ ನಗರದ ಕಿಲಾರಿಪೇಟೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯಿತು.


ಕೋಲಾರ, 04 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ನಗರದ ಕಿಲಾರಿಪೇಟೆಯ ಶ್ರೀ ರುಕ್ಮಿಣಿ ಸತ್ಯಭಾಮ ಸಮೇತ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ೬೬ನೇ ವರ್ಷದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮಗಳನ್ನು ಮೂರು ದಿನಗಳ ಕಾಲ ಶ್ರದ್ಧಾಭಕ್ತಿಗಳಿಂದ ನಡೆದಿದ್ದು, ಶುಕ್ರವಾರ ಸ್ವಾಮಿಯ ಕಲ್ಯಾಣೋತ್ಸವ ಅತ್ಯಂತ ವೈಭವದಿಂದ ನಡೆಯಿತು. ಕೋಲಾರದ ಕಿಲಾರಿಪೇಟೆಯಲ್ಲಿ ಸಾಂಪ್ರದಾಯಿಕವಾಗಿ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮಗಳು ವೈಭವದಿಂದ ನಡೆದಿದ್ದು, ಮೇಸ್ತ್ರಿ ನಾರಾಯಣಸ್ವಾಮಿ ಮಗಳು ಉಷಾ, ಅಳಿಯ ಶಂಕರ್ ದಂಪತಿಗಳು ಕಲ್ಯಾಣೋತ್ಸವ ನಡೆಸಿಕೊಟ್ಟಿದ್ದು, ಇವರೇ ಈ ಬಾರಿಯೂ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.

ಮುಂಜಾನೆಯಿಂದಲೇ ಸ್ವಾಮಿಗೆ ಅಭಿಷೇಕ, ಇಡೀ ದೇವಾಲಯಕ್ಕೆ ಪುಷ್ಪಾಲಂಕಾರ ಮಾಡಿದ್ದು, ಭಾರಿ ಪ್ರಮಾಣದಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದು, ಶ್ರದ್ಧಾಭಕ್ತಿಯ ವೈಭವದ ಪೂಜೆಗೆ ಮಾತ್ರ ಅಡ್ಡಿ ಇರಲಿಲ್ಲ.

ಸ್ವಾಮಿಗೆ ಅಲಂಕಾರ ಮುಗಿಯುತ್ತಿದ್ದಂತೆ ನಗರದ ವಿವಿಧ ಬಡಾವಣೆಗಳ ನೂರಾರು ಮಂದಿ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದು, ಸಾವಿರಾರು ಮಂದಿಗೆ ಅನ್ನಸಂತರ್ಪಣೆ ನಡೆಯಿತು.

ಮೂರು ದಿನಗಳಿಂದ ಮುತ್ತೈದೆಯರಿಗೆ ಬಳೆ ತೊಡಿಸುವುದು, ದೀಪೋತ್ಸವ ಸೇವೆ ಸೇರಿದಂತೆ ವಿವಿಧ ಪೂಜಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬಂದಿರುವ ಕಿಲಾರಿಪೇಟೆ ಭಕ್ತಾಧಿಗಳು ಸೋಮವಾರ ದೇವಾಲಯದ ಆವರಣದಲ್ಲಿ ಕಲ್ಯಾಣೋತ್ಸವವನ್ನು ನಡೆಸಿದರು.

ನಗರಸಭೆ ಮಾಜಿ ಸದಸ್ಯ ಮೇಸ್ತ್ರಿ ನಾರಾಯಣಸ್ವಾಮಿ ಅವರ ಕುಟುಂಬದವರು, ಮಧ್ಯಾಹ್ನ ದೇವಾಲಯದ ಹೊರಭಾಗದಲ್ಲಿ ಭಕ್ತರ ಸಮ್ಮುಖದಲ್ಲಿ ಶಾಸ್ತೊçÃಕ್ತವಾಗಿ ಮಂಗಳವಾದ್ಯ, ಮೇಳದೊಂದಿಗೆ ಕಲ್ಯಾಣೋತ್ಸವ ನೆರವೇರಿಸಿದರು. ಶ್ರೀರುಕ್ಮಿಣಿ ಸತ್ಯಭಾಮ ಶ್ರೀವೇಣುಗೋಪಾಲಸ್ವಾಮಿಗೆ ವಿಶೇಷ ಹೂವಿನ ಅಲಂಕಾರವನ್ನು ಮಾಡಲಾಗಿತ್ತು. ಕಲ್ಯೋಣೋತ್ಸವದ ನಂತರ ನೆರೆದಿದ್ದ ನೂರಾರು ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗವೂನಡೆಯಿತು. ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿದ್ದು, ನೂರಾರು ಮಂದಿ ಸ್ವಾಮಿಯ ದರ್ಶನ ಪಡೆದರು.ಪ್ರಧಾನ ಅರ್ಚಕರಾದ ರಘುದೀಕ್ಷಿತ್ ಮತ್ತಿತರರು ಕಲ್ಯಾಣೋತ್ಸವ ನಡೆಸಿಕೊಟ್ಟರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande