
ಸಿಂಧನೂರು, 04ಸೆಪ್ಟೆಂಬರ್(ಹಿ.ಸ.)
ಆ್ಯಂಕರ್;
ಪಂಚ ಗ್ಯಾರಂಟಿಗಳ ಭ್ರಮೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರ ನಾಡಿನ ಕಡುಬಡವರು, ರೈತರು ಹಾಗೂ ಕೂಲಿ ಕಾರ್ಮಿಕರ ನೈಜ ಸಮಸ್ಯೆಗಳನ್ನು ಸಂಪೂರ್ಣವಾಗಿ ಮರೆತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಕಿಡಿಕಾರಿದ್ದಾರೆ.
ಸಿಂಧನೂರಿನಲ್ಲಿ ಬಿಜೆಪಿ 4ನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವೃದ್ಧಾಪ್ಯ ವೇತನ ಮತ್ತು ಅಂಗವಿಕಲರ ಮಾಸಾಶನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿಗಳು ಕಳೆದ ಆರು ತಿಂಗಳಿಂದ ಫಲಾನುಭವಿಗಳಿಗೆ ತಲುಪಿಲ್ಲ. ಇದರಿಂದ ಕಡುಬಡವರು ಸರ್ಕಾರಕ್ಕೆ ಶಾಪ ಹಾಕುವಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಸರ್ಕಾರದ ಪ್ರಮುಖ ಆರೋಪಗಳು ಮತ್ತು ವೈಫಲ್ಯಗಳು:ವಿಳಂಬವಾದ ಪಿಂಚಣಿ: ವೃದ್ಧರು ಮತ್ತು ಅಂಗವಿಕಲರಿಗೆ ಕಳೆದ ಹಲವು ತಿಂಗಳುಗಳಿಂದ ಮಾಸಾಶನ ಸಿಗದೆ ಬದುಕು ಕಷ್ಟವಾಗಿದೆ.ಗಂಗಾ ಕಲ್ಯಾಣ ಯೋಜನೆ ಹಿನ್ನಡೆ: ಅರ್ಹ ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯ ಲಾಪು ಸರಿಯಾಗಿ ತಲುಪುತ್ತಿಲ್ಲ.
ಮನೆಗಳ ನಿರ್ಮಾಣ ವೈಫಲ್ಯ: ಬಡವರಿಗೆ ಸೂರು ಕಲ್ಪಿಸುವ ವಸತಿ ಯೋಜನೆಯು ಸಂಪೂರ್ಣವಾಗಿ ನೆನೆಗುದಿಗೆ ಬಿದ್ದಿದೆ.ಅನುದಾನ ಕೊರತೆ: ಸಮಾಜದ ದುರ್ಬಲ ವರ್ಗಗಳ ಕಲ್ಯಾಣಕ್ಕೆ ನೀಡಬೇಕಾದ ಅನುದಾನವನ್ನು ಕಾಲಮಿತಿಯಲ್ಲಿ ಬಿಡುಗಡೆ ಮಾಡಲು ಸರ್ಕಾರ ವಿಫಲವಾಗಿದೆ.ಒಂದು ಕಡೆ ಗ್ಯಾರಂಟಿಗಳ ಪ್ರಚಾರದಲ್ಲಿ ಸರ್ಕಾರ ಮುಳುಗಿದ್ದರೆ, ಮತ್ತೊಂದೆಡೆ ನಾಡಿನ ಬಡವರ ನೈಜ ಸಂಕಷ್ಟಗಳು ಕಡೆಗಣನೆಗೆ ಒಳಗಾಗಿವೆ. ರಾಜ್ಯದ ಜನತೆ ಸರ್ಕಾರದ ಆಡಳಿತದಿಂದ ಬೇಸತ್ತಿದ್ದು, ತಕ್ಷಣವೇ ಗ್ಯಾರಂಟಿ ಭ್ರಮೆಯಿಂದ ಹೊರಬಂದು ಜನರ ವಾಸ್ತವಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R