ರನ್ನ ಬೆಳಗಲಿಯಲ್ಲಿ ₹35 ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ
ಬಾಗಲಕೋಟೆ, 05 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ವಿಧಾನಸಭಾ ಕ್ಷೇತ್ರದ ರನ್ನ ಬೆಳಗಲಿ ಪಟ್ಟಣದಲ್ಲಿ ಮಹಾತ್ಮ ಜ್ಯೋತಿಬಾ ಫುಲೆ ಹಾಗೂ ಕ್ರಾಂತಿಯೋಗಿ ಸಾವಿತ್ರಿಬಾಯಿ ಫುಲೆ ಅವರ ಸ್ಮರಣಾರ್ಥವಾಗಿ ನಿರ್ಮಾಣವಾಗಲಿರುವ ನೂತನ ಸಮುದಾಯ ಭವನದ ಕಾಮಗಾರಿಗೆ ಶಾಸಕ ಆರ್.ಬಿ. ತಿಮ್ಮಾಪುರ ಅ
ಪೂಜೆ


ಬಾಗಲಕೋಟೆ, 05 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ವಿಧಾನಸಭಾ ಕ್ಷೇತ್ರದ ರನ್ನ ಬೆಳಗಲಿ ಪಟ್ಟಣದಲ್ಲಿ ಮಹಾತ್ಮ ಜ್ಯೋತಿಬಾ ಫುಲೆ ಹಾಗೂ ಕ್ರಾಂತಿಯೋಗಿ ಸಾವಿತ್ರಿಬಾಯಿ ಫುಲೆ ಅವರ ಸ್ಮರಣಾರ್ಥವಾಗಿ ನಿರ್ಮಾಣವಾಗಲಿರುವ ನೂತನ ಸಮುದಾಯ ಭವನದ ಕಾಮಗಾರಿಗೆ ಶಾಸಕ ಆರ್.ಬಿ. ತಿಮ್ಮಾಪುರ ಅವರು ಭೂಮಿಪೂಜೆ ನೆರವೇರಿಸಿದರು.

ಅಂದಾಜು ₹35 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಸಮುದಾಯ ಭವನವು ಸ್ಥಳೀಯ ಸಾರ್ವಜನಿಕರ ಬಹುದಿನಗಳ ಅಗತ್ಯವನ್ನು ಈಡೇರಿಸುವ ಮಹತ್ವದ ಅಭಿವೃದ್ಧಿ ಕಾಮಗಾರಿಯಾಗಿದೆ. ಭವನ ನಿರ್ಮಾಣ ಪೂರ್ಣಗೊಂಡ ಬಳಿಕ ಗ್ರಾಮದಲ್ಲಿ ನಡೆಯುವ ವಿವಿಧ ಸಾರ್ವಜನಿಕ ಸಭೆ-ಸಮಾರಂಭಗಳು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಹಲವು ಚಟುವಟಿಕೆಗಳಿಗೆ ಅನುಕೂಲವಾಗಲಿದೆ.

ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಆರ್.ಬಿ. ತಿಮ್ಮಾಪುರ ಅವರು, ಮಹಾತ್ಮ ಜ್ಯೋತಿಬಾ ಫುಲೆ ಹಾಗೂ ಕ್ರಾಂತಿಯೋಗಿ ಸಾವಿತ್ರಿಬಾಯಿ ಫುಲೆ ಅವರಂತಹ ಮಹನೀಯರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಸಮಾನತೆಯ ಹೋರಾಟಕ್ಕೆ ಮಹನೀಯರು ನೀಡಿದ ಕೊಡುಗೆಗಳು ಸದಾ ಸ್ಮರಣೀಯವಾಗಿದ್ದು, ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಗಳು ಮಹತ್ವ ಪಡೆದುಕೊಳ್ಳುತ್ತವೆ ಎಂದು ಹೇಳಿದರು.

ರನ್ನ ಬೆಳಗಲಿ ಪಟ್ಟಣದ ಜನರಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಕ್ತವಾದ ಸ್ಥಳದ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ನಿರ್ಮಾಣವಾಗಲಿರುವ ಸಮುದಾಯ ಭವನವು ಸಾರ್ವಜನಿಕರ ಅನುಕೂಲಕ್ಕೆ ಅತ್ಯಂತ ಸಹಕಾರಿಯಾಗಲಿದೆ. ಸಭೆ-ಸಮಾರಂಭಗಳು, ಸೇನಾನಿ ಕಾರ್ಯಕ್ರಮಗಳು, ಸಾರ್ವಜನಿಕ ಸಭೆಗಳು ಹಾಗೂ ವಿವಿಧ ಜನಪರ ಚಟುವಟಿಕೆಗಳಿಗೆ ಭವನವನ್ನು ಬಳಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಮುಧೋಳ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ನಿರಂತರ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಸಾರ್ವಜನಿಕರಿಗೆ ಅಗತ್ಯವಿರುವ ಸೌಲಭ್ಯಗಳ ಕಲ್ಪನೆ ಹಾಗೂ ಜನಪರ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಇದೇ ರೀತಿ ನಿರಂತರವಾಗಿ ಮುಂದುವರಿಯಲಿವೆ. ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದ ಸದಾ ಇರಲಿ ಎಂದು ಶಾಸಕ ಆರ್.ಬಿ. ತಿಮ್ಮಾಪುರ ಹೇಳಿದರು.

ಈ ಸಂದರ್ಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಮುಖಂಡರಾದ ಪ್ರವೀಣ ಪಾಟೀಲ, ಸಂಗಪ್ಪ ಅಮಾತಿ, ಈರಪ್ಪ ಕಿತ್ತೂರ, ಶಿವನಗೌಡ ಪಾಟೀಲ, ಹೆಚ್.ಎ. ಕಡಪಟ್ಟಿ, ಮುತ್ತು ಸನಟ್ಟಿ, ಪ್ರಕಾಶ ಕೊಣ್ಣೂರ ಸೇರಿದಂತೆ ಊರಿನ ಗಣ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಮಹನೀಯರ ಸ್ಮರಣಾರ್ಥ ನಿರ್ಮಾಣವಾಗುತ್ತಿರುವ ಈ ಸಮುದಾಯ ಭವನವು ರನ್ನ ಬೆಳಗಲಿ ಪಟ್ಟಣದ ಸಾಮಾಜಿಕ ಮತ್ತು ಸಾರ್ವಜನಿಕ ಚಟುವಟಿಕೆಗಳಿಗೆ ಹೊಸ ವೇದಿಕೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande