
ಮಂಡ್ಯ, 05ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಹೇಮಾವತಿ ನಾಲೆಯಲ್ಲಿ ಕೈಕಾಲು ತೊಳೆಯಲು ತೆರಳಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ನೀರಿನಲ್ಲಿ ಕೊಚ್ಚಿಹೋಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ನಿನ್ನೆ (ಶುಕ್ರವಾರ) ಸಂಜೆ ಸಂಭವಿಸಿದೆ.
ರಾಯಸಮುದ್ರ ಗ್ರಾಮದ ನಿವಾಸಿ ಕೆಂಪೇಗೌಡ (54) ಕೊಚ್ಚಿ ಹೋದ ದುರ್ದೈವಿ.ನಿನ್ನೆ ಸಂಜೆ ಕೆಂಪೇಗೌಡ ಅವರು ಗ್ರಾಮದ ಬಳಿ ಇರುವ ಹೇಮಾವತಿ ನಾಲೆಗೆ ಕೈಕಾಲು ತೊಳೆಯಲು ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ರಭಸವಾಗಿ ಹರಿಯುತ್ತಿದ್ದ ನೀರಿಗೆ ಬಿದ್ದಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಅಗ್ನಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತಡರಾತ್ರಿವರೆಗೂ ನಾಲೆಗಳಲ್ಲಿ ವ್ಯಕ್ತಿ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಕತ್ತಲಾವರಿಸಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಇಂದು ಬೆಳಗ್ಗೆಯಿಂದ ಮತ್ತೆ ಶೋಧ ಕಾರ್ಯವನ್ನು ಮುಂದುವರಿಸಲಾಗಿದೆ.
ಈ ದುರ್ಘಟನೆಯು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R