ಹೆನ್ನೂರು, ಅಗಸರಕೆರೆ ಸೇರಿ ವಿವಿಧೆಡೆ ಸಚಿವ ಕೃಷ್ಣ ಬೈರೇಗೌಡ ದಿಢೀರ್ ಪರಿಶೀಲನೆ
ಬೆಂಗಳೂರು, 05 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:ಬೆಂಗಳೂರು ಪೂರ್ವ ಪಾಲಿಕೆ ವ್ಯಾಪ್ತಿಯ ಹೆನ್ನೂರು, ಅಗಸರಕೆರೆ, ರಾಮಮೂರ್ತಿನಗರ ಹಾಗೂ ಕಸ್ತೂರಿನಗರ ಪ್ರದೇಶಗಳಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಮುಂಜಾನೆ ದಿಢೀರ್ ಪರಿಶೀಲನೆ ನಡೆಸಿದರು. ಈ ವೇಳೆ ವಿವಿಧ ಪ್ರದೇಶಗಳಲ್ಲಿನ ರ
ಸಚಿವ ಕೃಷ್ಣ ಬೈರೇಗೌಡ ಭೇಟಿ


ಬೆಂಗಳೂರು, 05 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:ಬೆಂಗಳೂರು ಪೂರ್ವ ಪಾಲಿಕೆ ವ್ಯಾಪ್ತಿಯ ಹೆನ್ನೂರು, ಅಗಸರಕೆರೆ, ರಾಮಮೂರ್ತಿನಗರ ಹಾಗೂ ಕಸ್ತೂರಿನಗರ ಪ್ರದೇಶಗಳಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಮುಂಜಾನೆ ದಿಢೀರ್ ಪರಿಶೀಲನೆ ನಡೆಸಿದರು.

ಈ ವೇಳೆ ವಿವಿಧ ಪ್ರದೇಶಗಳಲ್ಲಿನ ರಸ್ತೆಗಳ ಸ್ಥಿತಿ, ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ, ಸ್ಥಳೀಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಗರದ ಮೂಲಸೌಕರ್ಯ ಮತ್ತು ತ್ಯಾಜ್ಯ ನಿರ್ವಹಣೆಯಲ್ಲಿ ಲೋಪಗಳು ಕಂಡುಬಂದಲ್ಲಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande