ನೇಪಾಳದಲ್ಲಿ ನಾಪತ್ತೆಯಾಗಿರುವ ಕರ್ನಾಟಕದವರ ಗುರುತಿಗಾಗಿ ಡಿಎನ್ಎ ಮಾದರಿ ಸಂಗ್ರಹ
ಬೆಂಗಳೂರು, 05 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನೇಪಾಳದಲ್ಲಿ ನಾಪತ್ತೆಯಾಗಿರುವ ಕರ್ನಾಟಕದವರ ಗುರುತು ಪತ್ತೆಹಚ್ಚಲು ಹಾಗೂ ಅಗತ್ಯವಿದ್ದಲ್ಲಿ ಮೃತದೇಹಗಳನ್ನು ಸ್ವದೇಶಕ್ಕೆ ತರಲು ಅನುಕೂಲವಾಗುವಂತೆ ಡಿಎನ್‌ಎ ಪ್ರೊಫೈಲಿಂಗ್‌ಗಾಗಿ ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯನ್ನು ನೋಡಲ್ ಕೇಂದ್
ಜಿಬಿಎ ಆಯುಕ್ತರು ನೀಡಿರುವ ಪತ್ರಿಕಾ ಪ್ರಕಟಣೆ


ಬೆಂಗಳೂರು, 05 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ನೇಪಾಳದಲ್ಲಿ ನಾಪತ್ತೆಯಾಗಿರುವ ಕರ್ನಾಟಕದವರ ಗುರುತು ಪತ್ತೆಹಚ್ಚಲು ಹಾಗೂ ಅಗತ್ಯವಿದ್ದಲ್ಲಿ ಮೃತದೇಹಗಳನ್ನು ಸ್ವದೇಶಕ್ಕೆ ತರಲು ಅನುಕೂಲವಾಗುವಂತೆ ಡಿಎನ್‌ಎ ಪ್ರೊಫೈಲಿಂಗ್‌ಗಾಗಿ ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯನ್ನು ನೋಡಲ್ ಕೇಂದ್ರವಾಗಿ ನೇಮಕ ಮಾಡಲಾಗಿದೆ ಜಿಬಿಎ ಮುಖ್ಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೇಪಾಳದಲ್ಲಿ ನಾಪತ್ತೆಯಾಗಿರುವ ವ್ಯಕ್ತಿಗಳ ಗುರುತು ಪತ್ತೆ ಪ್ರಕ್ರಿಯೆಗೆ ಸಹಕರಿಸುವ ಉದ್ದೇಶದಿಂದ ಅವರ ಕುಟುಂಬದ ಪ್ರಥಮ ದರ್ಜೆಯ ಸಂಬಂಧಿಕರಿಂದ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಲಾಗುತ್ತದೆ. ನಾಪತ್ತೆಯಾಗಿರುವ ವ್ಯಕ್ತಿಯ ತಂದೆ, ತಾಯಿ, ಮಗ ಅಥವಾ ಮಗಳು ಡಿಎನ್‌ಎ ಮಾದರಿ ನೀಡಬಹುದಾಗಿದೆ.

ಡಿಎನ್‌ಎ ಮಾದರಿ ನೀಡಲು ಬರುವ ಸಂಬಂಧಿಕರು ಇತ್ತೀಚಿನ ಒಂದು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ, ಆಧಾರ್ ಸೇರಿದಂತೆ ಯಾವುದೇ ಸರ್ಕಾರಿ ಗುರುತಿನ ಚೀಟಿ ಹಾಗೂ ನಾಪತ್ತೆಯಾಗಿರುವ ವ್ಯಕ್ತಿಯೊಂದಿಗಿನ ಸಂಬಂಧವನ್ನು ದೃಢೀಕರಿಸುವ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕು.

ಡಿಎನ್‌ಎ ಮಾದರಿ ಸಂಗ್ರಹಣೆ ಮತ್ತು ಸಂಬಂಧಿತ ಪ್ರಕ್ರಿಯೆಗಳಿಗಾಗಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯನ್ನು ನೋಡಲ್ ಕೇಂದ್ರವನ್ನಾಗಿ ಮಾಡಲಾಗಿದೆ.

ವಿಧಿವಿಜ್ಞಾನ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ನಾಗೇಶ್ ಕುಪ್ಪಸ್ತ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ 9742707500 ಸಂಖ್ಯೆಗೆ ಸಂಪರ್ಕಿಸಬಹುದು. ನಿವಾಸಿ ವೈದ್ಯಾಧಿಕಾರಿ ಡಾ. ವಾದಿರಾಜ್ ಬಿ. ಪೊಕ್ಕನ್ ಅವರನ್ನು ಸಹ ಸಂಪರ್ಕಿಸಬಹುದಾಗಿದ್ದು, ಅವರ ದೂರವಾಣಿ ಸಂಖ್ಯೆ 9448408640.

ಹೆಚ್ಚಿನ ಮಾಹಿತಿ, ಮಾರ್ಗದರ್ಶನ ಹಾಗೂ ಅಗತ್ಯ ನೆರವಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಾಯವಾಣಿ 1533 ಅನ್ನು ಸಂಪರ್ಕಿಸುವಂತೆ ಮುಖ್ಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande