ಗುಣಮಟ್ಟದ ಶಿಕ್ಷಣದಿಂದಲೇ ವಿಕಸಿತ ಭಾರತ ನಿರ್ಮಾಣ ಸಾಧ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ, 05 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಗುಣಮಟ್ಟದ ಶಿಕ್ಷಣದ ಮೂಲಕವೇ ವಿಕಸಿತ ಭಾರತ ನಿರ್ಮಾಣದ ಗುರಿ ಸಾಧಿಸಲು ಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಶಿಕ್ಷಕರ ದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ-2026 ಪ್ರದಾನ ಸಮಾರಂಭದಲ್ಲಿ ಮಾತನಾಡಿ
राष्ट्रपति द्रौपदी मुर्मु शुक्रवार को शिक्षक दिवस के अवसर पर नई दिल्ली में आयोजित राष्ट्रीय शिक्षक पुरस्कार-2026 समारोह को संबोधित करते हुए


ನವದೆಹಲಿ, 05 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಗುಣಮಟ್ಟದ ಶಿಕ್ಷಣದ ಮೂಲಕವೇ ವಿಕಸಿತ ಭಾರತ ನಿರ್ಮಾಣದ ಗುರಿ ಸಾಧಿಸಲು ಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ-2026 ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿರುವ ಅವಕಾಶಗಳ ಸಮಾನತೆಯ ಆದರ್ಶವನ್ನು ಕಾರ್ಯರೂಪಕ್ಕೆ ತರುವ ಅತ್ಯಂತ ಪರಿಣಾಮಕಾರಿ ಸಾಧನ ಶಿಕ್ಷಣವಾಗಿದೆ. ದೇಶದ ಯಾವುದೇ ವಿದ್ಯಾರ್ಥಿ ಉತ್ತಮ ಶಿಕ್ಷಣ ಪಡೆಯುವ ಹಕ್ಕಿನಿಂದ ವಂಚಿತನಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಶಿಕ್ಷಕರನ್ನು ಗೌರವಿಸುವ ಸಮಾಜವೇ ನಿಜವಾದ ಅರ್ಥದಲ್ಲಿ ಪ್ರಗತಿಪರ ಸಮಾಜವಾಗಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರು ಜೀವಾಳದಂತೆ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಪ್ರೀತಿ ಮತ್ತು ಸಮರ್ಪಣೆಯ ಮೂಲಕ ವಿದ್ಯಾರ್ಥಿಗಳಲ್ಲಿ ಜ್ಞಾನ, ಪ್ರೇರಣೆ, ನೈತಿಕತೆ ಹಾಗೂ ಸೂಕ್ಷ್ಮ ಸಂವೇದನೆಯನ್ನು ಬೆಳೆಸುತ್ತಾರೆ ಎಂದು ರಾಷ್ಟ್ರಪತಿ ತಿಳಿಸಿದರು.

ಒಡಿಶಾದ ರಾಯರಂಗಪುರದ ಶ್ರೀ ಅರವಿಂದೋ ಸಮಗ್ರ ಶಿಕ್ಷಣ ಕೇಂದ್ರದಲ್ಲಿ ತಾವು ಬೋಧಿಸಿದ್ದ ವಿದ್ಯಾರ್ಥಿಗಳನ್ನು ಸ್ಮರಿಸಿದ ರಾಷ್ಟ್ರಪತಿ, ಅವರಿಂದಲೂ ತಾವು ಅನೇಕ ವಿಷಯಗಳನ್ನು ಕಲಿತಿರುವುದಾಗಿ ಹೇಳಿದರು. ವಿದ್ಯಾರ್ಥಿಗಳಿಂದ ದೊರೆತ ಪ್ರೀತಿ ಮತ್ತು ವಾತ್ಸಲ್ಯ ತಮ್ಮ ಜೀವನದ ಅತ್ಯಂತ ದೊಡ್ಡ ಸಾಧನೆಗಳಲ್ಲಿ ಒಂದಾಗಿದೆ ಎಂದರು.

ರಾಷ್ಟ್ರೀಯ ಪ್ರಶಸ್ತಿ ಪಡೆದ ಶಿಕ್ಷಕರಲ್ಲಿ ಗ್ರಾಮೀಣ ಪ್ರದೇಶಗಳ ಶಾಲೆಗಳ ಶಿಕ್ಷಕರ ಸಂಖ್ಯೆ ಹೆಚ್ಚಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸಾಧನೆಗಳನ್ನು ಒಳಗೊಂಡ ಕಿರುಚಿತ್ರಗಳನ್ನು ವೀಕ್ಷಿಸಿದ ಬಳಿಕ, ನಿಷ್ಠಾವಂತ ಶಿಕ್ಷಕರು ರಾಷ್ಟ್ರ ನಿರ್ಮಾಣದ ಮುಂಚೂಣಿ ಶಿಲ್ಪಿಗಳು ಎಂಬ ತಮ್ಮ ನಂಬಿಕೆ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದರು.

ರಾಜಸ್ಥಾನದ ಝಾಲಾವಾಡ್ ಜಿಲ್ಲೆಯ ಗ್ರಾಮದ ಶಿಕ್ಷಕರೊಬ್ಬರು ಆಧುನಿಕ ತಂತ್ರಜ್ಞಾನ ಬಳಸಿ ಮಕ್ಕಳಿಗೆ ಜೀವಶಾಸ್ತ್ರ ಬೋಧನೆಯನ್ನು ಪರಿಣಾಮಕಾರಿಯಾಗಿಸಿದ ಉದಾಹರಣೆಯನ್ನು ರಾಷ್ಟ್ರಪತಿ ಪ್ರಸ್ತಾಪಿಸಿದರು. ಇದೊಂದು ಆಧುನಿಕ ಬೋಧನಾ ಪದ್ಧತಿಯ ಅತ್ಯುತ್ತಮ ಉದಾಹರಣೆ ಎಂದು ಅವರು ಬಣ್ಣಿಸಿದರು.

ಸುಮಾರು 12 ವರ್ಷಗಳ ಹಿಂದೆ ದೇಶದಲ್ಲಿ ಪ್ರಾಥಮಿಕ ಹಂತದಲ್ಲಿ ಶಾಲೆ ತೊರೆಯುತ್ತಿದ್ದ ಮಕ್ಕಳ ಪ್ರಮಾಣ ಸುಮಾರು ಶೇ.4.5ರಷ್ಟಿತ್ತು. ಇದೀಗ ಅದು ಅತ್ಯಲ್ಪ ಮಟ್ಟಕ್ಕೆ ಇಳಿದಿದ್ದು, ಶಿಕ್ಷಕರ ನಿರಂತರ ಪ್ರಯತ್ನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ದ್ರೌಪದಿ ಮುರ್ಮು ಹೇಳಿದರು.

ವಿಕಸಿತ ಭಾರತ ನಿರ್ಮಾಣದ ಗುರಿಯತ್ತ ದೇಶ ಮುನ್ನಡೆಯುತ್ತಿದ್ದು, ವಿಶ್ವಮಟ್ಟದ ಶಿಕ್ಷಣ ವ್ಯವಸ್ಥೆಯ ಬಲದಿಂದಲೇ ಈ ಗುರಿ ಸಾಧಿಸಲು ಸಾಧ್ಯ. ದೇಶದ ಯಾವುದೇ ವಿದ್ಯಾರ್ಥಿ ಉತ್ತಮ ಶಿಕ್ಷಣದ ಹಕ್ಕಿನಿಂದ ವಂಚಿತನಾಗದಂತೆ ಎಲ್ಲರೂ ಪ್ರಯತ್ನಿಸಬೇಕು ಎಂದು ರಾಷ್ಟ್ರಪತಿ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಚಿವರಾದ ಜಯಂತ್ ಚೌಧರಿ ಹಾಗೂ ಸುಕಾಂತ್ ಮಜುಂದಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande