
ಕೋಲಾರ, 05 ಸೆಪ್ಟೆಂಬರ್ (ಹಿ.ಸ)
ಆ್ಯಂಕರ್ : ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದಲ್ಲಿ ಈಗಾಗಲೇ ಬಾಲಕಿಯ ಹೇಳಿಕೆಯಂತೆ ಒಬ್ಬ ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರೆದಿದೆ. ಪ್ರಕರಣದ ತನಿಖೆಯ ಅಂಗವಾಗಿ ಸಾಕ್ಷಿದಾರರ ವಿಚಾರಣೆ, ಸಿಸಿಟಿವಿ ದೃಶ್ಯಾವಳಿಗಳ ಸಂಗ್ರಹ ಹಾಗೂ ಇತರೆ ಅಗತ್ಯ ಸಾಕ್ಷಾ÷್ಯಧಾರಗಳ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದ್ದು ಲಭ್ಯವಾಗುವ ಸಾಕ್ಷö್ಯಧಾರಗಳ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯ ಹೆಸರು, ಫೋಟೋ, ವಿಳಾಸ, ಶಾಲೆ, ಕುಟುಂಬದ ವಿವರಗಳು ಅಥವಾ ಬಾಲಕಿಯನ್ನು ಗುರುತಿಸಲು ಸಾಧ್ಯವಾಗುವ ಯಾವುದೇ ಮಾಹಿತಿಯನ್ನು ಯಾವುದೇ ವ್ಯಕ್ತಿ ಅಥವಾ ಮಾಧ್ಯಮಗಳು ಪ್ರಕಟಿಸಬಾರದು ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಪೊಲೀಸ್ ಇಲಾಖೆ ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ಎಚ್ಚರಿಕೆ ನೀಡಲಾಗಿದೆ.
ವಿಶೇಷವಾಗಿ, ಸಂತ್ರಸ್ತ ಬಾಲಕಿ ಹಾಗೂ ಆಕೆಯ ಪೋಷಕರ ಗುರುತು ಅಥವಾ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸುವುದು ಕಾನೂನು ಬಾಹಿರವಾಗಿದೆ. ಬಾಲಕಿಯ ಗೌಪ್ಯತೆ ಮತ್ತು ಘನತೆಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಬಾಲಕಿಯ ಗುರುತನ್ನು ಬಹಿರಂಗಪಡಿಸುವ ರೀತಿಯಲ್ಲಿ ಯಾವುದೇ ಫೋಟೋ, ವಿಡಿಯೋ, ಹೆಸರು, ವಿಳಾಸ ಅಥವಾ ಇತರೆ ಮಾಹಿತಿಯನ್ನು ಸಾಮಾಜಿಕ ಜಾಲತಾಣ, ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಂ, ಯೂಟ್ಯೂಬ್ ಸೇರಿದಂತೆ ಯಾವುದೇ ಮಾಧ್ಯಮಗಳಲ್ಲಿ ಪ್ರಕಟಿಸಿದಲ್ಲಿ, ಸಂಬAಧಪಟ್ಟವರ ವಿರುದ್ಧ ಜೆ.ಜೆ ಆಕ್ಟ್ ಮತ್ತು ಪೋಸ್ಕೋ ಆಕ್ಟ್ ಹಾಗೂ ಅನ್ವಯವಾಗುವ ಇತರೆ ಕಾನೂನುಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಯಾವುದೇ ಧೃಡಿಕರಣವಿಲ್ಲದ ಶಂಕಿತಸ್ಥರೆAದು ಫೋಟೋಗಳನ್ನು ಪ್ರಕಟಿಸುವುದು, ಹೆಸರಗಳನ್ನು ಹರಡುವುದು ಅಥವಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಹಾಪೋಹ ಮತ್ತು ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಅಥವಾ ಸಾಕ್ಷ÷್ಯವಿದ್ದಲ್ಲಿ ಅದನ್ನು ಬಂಗಾರಪೇಟೆ ಪೊಲೀಸ್ ಠಾಣೆ ಅಥವಾ ಎಸ್ಪಿ ಕಚೇರಿಗೆ ನೀಡುವಂತೆ ಎಸ್.ಪಿ ಶಿವಾಂಶು ರಜಪೂತ್ ಮನವಿ ಮಾಡಿದ್ದಾರೆ.
ಇಂತಹ ಸೂಕ್ಷö್ಮ ಪ್ರಕರಣದ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಾಗೂ ಪ್ರಸಾರಗೊಂಡಿರುವ ಮಾಹಿತಿಗಳನ್ನು ಹಂಚಿಕೊAಡು ಅಥವಾ ಉಹಾಪೋಹ ಮತ್ತು ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಠಿಸಿ ಗೊಂದಲ ಅಥವಾ ದ್ವೇಷದ ವಾತಾವರಣ ಸೃಷ್ಟಿಸುವವರ ವಿರುದ್ಧ ಪೊಲೀಸರು ಗಂಭೀರವಾಗಿ ಪರಿಗಣಿಸಿ ಅಂತಹವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಶಿವಾಂಶು ರಜಪೂತ್ ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್