ಪಡಿತರ : ಇ-ಕೆವೈಸಿ - ಸೆ.30 ರಂದು ಕೊನೆಯ ದಿನ
ಬಳ್ಳಾರಿ, 05 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಪ್ರತಿ 5 ವರ್ಷಗಳಿಗೊಮ್ಮೆ ಪಡಿತರ ಚೀಟಿದಾರರ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಿರುವುದರಿಂದ ಬಳ್ಳಾರಿ ಜಿಲ್ಲೆಯಲ್ಲಿ ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿದ ಒಟ್ಟು 6,33,4
ಪಡಿತರ : ಇ-ಕೆವೈಸಿ - ಸೆ.30 ರಂದು ಕೊನೆಯ ದಿನ


ಬಳ್ಳಾರಿ, 05 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಪ್ರತಿ 5 ವರ್ಷಗಳಿಗೊಮ್ಮೆ ಪಡಿತರ ಚೀಟಿದಾರರ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಿರುವುದರಿಂದ ಬಳ್ಳಾರಿ ಜಿಲ್ಲೆಯಲ್ಲಿ ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿದ ಒಟ್ಟು 6,33,409 ಪಡಿತರ ಚೀಟಿದಾರರಿಗೆ ಮರು ಇ-ಕೆವೈಸಿ ದೃಡೀಕರಿಸಿಕೊಳ್ಳುವಂತೆ ಸೂಚಿಸಲಾಗಿತ್ತು. ಈ ವರೆಗೆ 19,012 ಪಡಿತರ ಚೀಟಿದಾರರು ಇ-ಕೆವೈಸಿ ದೃಢೀಕರಿಸಿದ್ದು, ಉಳಿದ ಎಲ್ಲಾ ಅರ್ಜಿದಾರರು ಸೆಪ್ಟೆಂಬರ್ 2026ರ ಅಂತ್ಯದವರೆಗೆ ಇ-ಕೆವೈಸಿ ದೃಡೀಕರಿಸುವುದು ಕಡ್ಡಾಯವಾಗಿರುತ್ತದೆ.

ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ಬೇಟಿ ನೀಡಿ ಅರ್ಜಿದಾರರು ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಅವಕಾಶ ನೀಡಲಾಗಿದೆ. ಇ-ಕೆವೈಸಿ ಮಾಡಿಸಿಕೋಳ್ಳದೆ ಇದ್ದಲ್ಲಿ ಆಹಾರಧಾನ್ಯ ವಿತರಣೆ ಸ್ಥಗಿತಗೊಳ್ಳುವ ಸಂಭವ ಇರುವುದರಿಂದ, ಎಲ್ಲಾ ಅರ್ಜಿದಾರರು ನಿಗದಿತ ಸಮಯದೊಳಗೆ (30-09-2026) ಸಮೀಪದ ನ್ಯಾಯಬೆಲೆ ಅಂಗಡಿಗೆ ಬೇಟಿ ನೀಡಿ ಇ-ಕೆವೈಸಿ ಮಾಡಿಸಲು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿಗೆ ಭೇಟಿ ನೀಡಿ ಅಥವಾ ದೂ:08392-272557 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಉಪ ನಿರ್ದೇಶಕ ಕೆ.ಆರ್.ದೇವರಾಜ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande