ವಿ ಬಿ ಜಿ ರಾಮ್ ಜಿ ಯೋಜನೆಯ ಜಾಗೃತಿ ಕರಪತ್ರ ಬಿಡುಗಡೆ
ವಿಬಿರಾಮ್ಜೀ ಯೋಜನೆಯ ಜಾಗೃತಿ ಕರಪತ್ರ ಬಿಡುಗಡೆ
ಕೋಲಾರದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ವಿಬಿಜಿರಾಮ್ ಜೀ ಕರಪತ್ರ ಬಿಡುಗಡೆ ಮಾಡಿದರು.


ಕೋಲಾರ : 05 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿಬಿಜಿರಾಮ್ ಜಿ ಯೋಜನೆಯಡಿ ಪ್ರಸ್ತುತ ೩೧೮ ಕಾಮಗಾರಿಗಳ ಅನುಷ್ಠಾನಕ್ಕೆ ಅವಕಾಶ ನೀಡಲಾಗಿದೆ. ವಿಬಿಜಿರಾಮ್ಜಿ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗದ ಆರ್ಥಿಕ ಭದ್ರತೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಜಲಭದ್ರತೆ ಹಾಗೂ ಜೀವನೋಪಾಯ ಉತ್ತೇಜಿಸುವ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ, ಪರಿಸರ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದರು.

ನಗರದ ಸರ್ಕಾರಿ ಪದವಿ ಪೂರ್ವ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 'ಪ್ರಜಾ ಸೇವಾ ಆಂದೋಲನ' ಕಾರ್ಯಕ್ರಮದಲ್ಲಿ, ಕೋಲಾರ ತಾಲೂಕು ಮಾಹಿತಿ, ಶಿಕ್ಷಣ ಹಾಗೂ ಸಂವಹನ ಘಟಕದ ವತಿಯಿಂದ ಸಿದ್ಧಪಡಿಸಲಾಗಿದ್ದ ವಿ ಬಿ ಜಿ ರಾಮ್ ಜಿ ಯೋಜನೆಯ ಜಾಗೃತಿ ಕರಪತ್ರವನ್ನು ಸಚಿವರು ಅಧಿಕೃತವಾಗಿ ಬಿಡುಗಡೆಗೊಳಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಪ್ರತಿಯೊಂದು ಮನೆಗೂ ಸರ್ಕಾರದ ಯೋಜನೆಗಳ ಮಾಹಿತಿ ತಲುಪುವುದು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಸಕ್ರಿಯವಾಗಿ ಶ್ರಮಿಸಬೇಕು. ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಸರ್ಕಾರ ಜಾರಿಗೆ ತರುವ ಗ್ರಾಮೀಣಾಭಿವೃದ್ಧಿ ಯೋಜನೆಗಳು ಕೇವಲ ಕಾಗದಕ್ಕಷ್ಟೇ ಸೀಮಿತವಾಗದೆ, ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಈ ವಿಬಿರಾಮ್ಜೀ ಯೋಜನೆಯ ಕುರಿತು ತಾಲೂಕಿನ ಪ್ರತಿಯೊಂದು ಮನೆ-ಮನೆಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಲಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ, ಕೆರೆಗಳ ಅಭಿವೃದ್ಧಿ, ನಾಲಾಗಳ ಪುನಶ್ಚೇತನ, ಗೋ ಕಟ್ಟೆ ಅಭಿವೃದ್ಧಿ, ಮಳೆನೀರು ಕೊಯ್ಲು, ಕೊಳವೆಬಾವಿ ಮರುಪೂರಣ ಘಟಕ, ಬೋಲ್ಡರ್ ಚೆಕ್, ಕಲ್ಯಾಣಿಗಳ ಜೀರ್ಣೋದ್ಧಾರ, ಚೆಕ್ಡ್ಯಾಂನAತಹ ಜಲಸಂರಕ್ಷಣಾ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೆತ್ತಿಕೊಳ್ಳಲಾಗುತ್ತಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ನಿರಂತರ ನೀರಿನ ಲಭ್ಯತೆ ಸಾಧ್ಯವಾಗಲಿದೆ ಎಂದು ತಿಳಿಸಿದರು.

ಮತ್ತೊಂದೆಡೆ, ಗ್ರಾಮೀಣ ಜನರ ಜೀವನೋಪಾಯವನ್ನು ಬಲಪಡಿಸಲು ವೈಯಕ್ತಿಕ ಆಧಾರಿತ ಕಾಮಗಾರಿಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ದನದ ಶೆಡ್, ಕುರಿ, ಮೇಕೆ ಶೆಡ್, ಕೋಳಿ ಶೆಡ್, ಹಂದಿ ಶೆಡ್, ಗೊಬ್ಬರ ಘಟಕ, ಕೃಷಿಹೊಂಡ, ಬಚ್ಚಲು ಗುಂಡಿ, ವಸತಿ ಯೋಜನೆ, ಬಾವಿ ನಿರ್ಮಾಣ ನಿರ್ಮಾಣದಂತಹ ಕಾಮಗಾರಿಗಳ ಮೂಲಕ ಗ್ರಾಮೀಣ ಕುಟುಂಬಗಳು ಸ್ವಾವಲಂಬಿ ಜೀವನ ನಡೆಸಲು ಯೋಜನೆಯು ನೆರವಾಗುತ್ತಿದೆ ಎಂದು ಕೋಲಾರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಪ್ರವೀಣ್ ಪಿ ಬಾಗೇವಾಡಿರವರು ಸಚಿವರಿಗೆ ಮಾಹಿತಿ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande