ಬೆಂಗಳೂರಿನಲ್ಲಿ ವರ್ಜಿನ್ ಅಟ್ಲಾಂಟಿಕ್ ವಿಮಾನ ತುರ್ತು ಭೂಸ್ಪರ್ಶ
ಬೆಂಗಳೂರಿನಲ್ಲಿ ವರ್ಜಿನ್ ಅಟ್ಲಾಂಟಿಕ್ ವಿಮಾನ ತುರ್ತು ಭೂಸ್ಪರ್ಶ
ಬೆಂಗಳೂರಿನಲ್ಲಿ ವರ್ಜಿನ್ ಅಟ್ಲಾಂಟಿಕ್ ವಿಮಾನ ತುರ್ತು ಭೂಸ್ಪರ್ಶ


ದೇವನಹಳ್ಳಿ, 06ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ತಾಂತ್ರಿಕ ದೋಷದಿಂದಾಗಿ ಲಂಡನ್ಗೆ ಹೊರಟಿದ್ದ ವರ್ಜಿನ್ ಅಟ್ಲಾಂಟಿಕ್ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಿಂದ ಬೆಳಗ್ಗೆ 8:20ಕ್ಕೆ ಟೇಕಾಫ್ ಆಗಿದ್ದ ಈ ವಿಮಾನದಲ್ಲಿ 270 ಪ್ರಯಾಣಿಕರು ಇದ್ದರು.

ಆದರೆ, ಆಗಸಕ್ಕೆ ಹಾರಿದ ಕೆಲವೇ ನಿಮಿಷಗಳಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಈ ಕಾರಣದಿಂದ, ವಿಮಾನವು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ತುಮಕೂರು ಸುತ್ತಮುತ್ತ ರೌಂಡ್ಸ್ ಹಾಕಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಇದ್ದಾಗ, ವಿಮಾನವನ್ನು ಕೆಂಪೇಗೌಡ ಏರ್ಪೋರ್ಟ್ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಸದ್ಯ, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ತುರ್ತು ಭೂಸ್ಪರ್ಶದ ಬಳಿಕ ಪ್ರಯಾಣಿಕರಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎನ್ನಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande