ಸಾರ್ವಜನಿಕ ಸ್ಥಳಗಳಲ್ಲಿ ಶಸ್ತ್ರಾಸ್ತ್ರ ತಪಾಸಣೆಗೆ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್
ಹುಬ್ಬಳ್ಳಿ, 06 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಸಾರ್ವಜನಿಕ ಸ್ಥಳಗಳಲ್ಲಿ ಚಾಕು ಸೇರಿದಂತೆ ಮಾರಕಾಸ್ತ್ರಗಳೊಂದಿಗೆ ಸಂಚರಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ‘ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್’ಗಳನ್ನು ಆರಂಭಿಸಲಾಗಿದೆ. ಈ ತಂಡಗಳು ಬಸ್ ನಿಲ
ತಪಾಸಣೆ


ಹುಬ್ಬಳ್ಳಿ, 06 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಸಾರ್ವಜನಿಕ ಸ್ಥಳಗಳಲ್ಲಿ ಚಾಕು ಸೇರಿದಂತೆ ಮಾರಕಾಸ್ತ್ರಗಳೊಂದಿಗೆ ಸಂಚರಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ‘ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್’ಗಳನ್ನು ಆರಂಭಿಸಲಾಗಿದೆ.

ಈ ತಂಡಗಳು ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಪಾಸಣೆ ನಡೆಸಲಿವೆ. ವ್ಯಕ್ತಿಗಳ ಬಳಿ ಯಾವುದೇ ರೀತಿಯ ಶಸ್ತ್ರಾಸ್ತ್ರ ಪತ್ತೆಯಾದಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವಳಿ ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಅಪರಾಧ ನಿಯಂತ್ರಣದ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಇಂದು ಇದುವರೆಗೆ 215 ವಾಹನಗಳನ್ನು ತಪಾಸಣೆ ನಡೆಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande