
ನವದೆಹಲಿ, 06 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಬಳಿ ಸತ್ಯನಿಕೇತನದಲ್ಲಿ ಖಾಸಗಿ ಕಟ್ಟಡ ಕುಸಿದು ಬಿದ್ದ ಘಟನೆ ಬಗ್ಗೆ ಮುಖ್ಯಮಂತ್ರಿ ರೇಖಾ ಗುಪ್ತಾ ಅವರೊಂದಿಗೆ ಚರ್ಚಿಸಿದ್ದು, ತ್ವರಿತ ಪರಿಹಾರ ಕಾರ್ಯ ನಡೆದಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದ ದಕ್ಷಿಣ ಕ್ಯಾಂಪಸ್ ಸಮೀಪ ಖಾಸಗಿ ಕಟ್ಟಡ ಕುಸಿದುಬಿದ್ದಿರುವ ದುರಂತ ತೀವ್ರ ಬೇಸರ ಉಂಟು ಮಾಡಿದೆ ಎಂದು ವಿಷಾದಿಸಿದರುವ ಸಚಿವರು, ದೆಹಲಿ ಸಿಎಂ ಅವರು ರಕ್ಷಣಾ ಕಾರ್ಯ ಮತ್ತು ಪರಿಹಾರ ಕಾರ್ಯದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆದಿದೆ. ತ್ವರಿತವಾಗಿ ಪರಿಹಾರ ಕಾರ್ಯ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾಗಿ ಹೇಳಿದ್ದಾರೆ.
ಕಟ್ಟಡದಡಿ ಸಿಲುಕಿಕೊಂಡಿರುವವರೆಲ್ಲ ಸುರಕ್ಷಿತವಾಗಿರಲೆಂದು ಪ್ರಾರ್ಥಿಸಿರುವ ಸಚಿವ ಪ್ರಲ್ಹಾದ ಜೋಶಿ, ಗಾಯಗೊಂಡವರು ಶೀಘ್ರ ಚೇತರಿಸಿಕೊಂಡು ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.