ಅಂಡಮಾನ್-ನಿಕೋಬಾರ್ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಡಾ. ದಿನೇಶ್ ಶರ್ಮಾ
ನವದೆಹಲಿ, 06 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿರುವ ಉತ್ತರ ಪ್ರದೇಶದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ದಿನೇಶ್ ಶರ್ಮಾ ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಮಹತ್ವದ ಜವಾಬ್ದಾರಿ ನೀಡಿರುವ ಬಿಜೆಪ
ದಿನೇಶ್ ಶರ್ಮಾ


ನವದೆಹಲಿ, 06 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿರುವ ಉತ್ತರ ಪ್ರದೇಶದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ದಿನೇಶ್ ಶರ್ಮಾ ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಮಹತ್ವದ ಜವಾಬ್ದಾರಿ ನೀಡಿರುವ ಬಿಜೆಪಿ ಕೇಂದ್ರ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ಕೇಂದ್ರ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ಈ ಮಹತ್ವದ ಜವಾಬ್ದಾರಿ ನನಗೆ ಕೇವಲ ಒಂದು ಹುದ್ದೆಯಲ್ಲ. ಸಂವಿಧಾನ, ರಾಷ್ಟ್ರ ಮತ್ತು ಜನಸೇವೆಯತ್ತ ಇರುವ ದೊಡ್ಡ ಹೊಣೆಗಾರಿಕೆಯಾಗಿದೆ. ಸಂಪೂರ್ಣ ನಿಷ್ಠೆ, ಪ್ರಾಮಾಣಿಕತೆ ಮತ್ತು ಸಮರ್ಪಣೆಯಿಂದ ಈ ಜವಾಬ್ದಾರಿಯನ್ನು ನಿರ್ವಹಿಸುವ ಸಂಕಲ್ಪ ಮಾಡುತ್ತೇನೆ ಎಂದು ಡಾ. ದಿನೇಶ್ ಶರ್ಮಾ ತಿಳಿಸಿದ್ದಾರೆ.

ತಮ್ಮನ್ನು ನಿರಂತರವಾಗಿ ಪ್ರೋತ್ಸಾಹಿಸಿದ ಹಿರಿಯರು, ಹಿತೈಷಿಗಳು, ಸ್ನೇಹಿತರು ಹಾಗೂ ದೇಶದ ಜನರಿಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿರುವ ಅವರು, ಎಲ್ಲರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದ ಸದಾ ತಮ್ಮೊಂದಿಗೆ ಇರಲಿ ಎಂದು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande