ನಿಂಗರಾಯ ದೇವರ ದರ್ಶನ ಪಡೆದ ಶಾಸಕ ಯಶವಂತರಾಯಗೌಡ ಪಾಟೀಲ
ವಿಜಯಪುರ, 06 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ನಗರದ ಆರಾಧ್ಯ ದೈವ ಶ್ರೀ ನಿಂಗರಾಯ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಶ್ರೀ ನಿಂಗರಾಯ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಜಾತ್ರಾ ಮಹೋತ್ಸವದ
ಪೂಜೆ


ವಿಜಯಪುರ, 06 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ನಗರದ ಆರಾಧ್ಯ ದೈವ ಶ್ರೀ ನಿಂಗರಾಯ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಶ್ರೀ ನಿಂಗರಾಯ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದ್ದು, ವಿವಿಧೆಡೆಯಿಂದ ಆಗಮಿಸಿದ ಭಕ್ತರು ಶ್ರೀ ನಿಂಗರಾಯ ದೇವರ ದರ್ಶನ ಪಡೆದು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ಪ್ರಾರ್ಥಿಸಿದರು.

ಈ ಪವಿತ್ರ ಸಂದರ್ಭದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದರು.

ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ದೊರೆಯಲಿ. ಪ್ರತಿಯೊಬ್ಬರ ಜೀವನದಲ್ಲಿ ನೆಮ್ಮದಿ, ಸಂತೋಷ ಮತ್ತು ಸಮೃದ್ಧಿ ನೆಲೆಸಲಿ. ರೈತರು, ಕಾರ್ಮಿಕರು, ಯುವಕರು ಸೇರಿದಂತೆ ಎಲ್ಲ ವರ್ಗದ ಜನರ ಬದುಕು ಹಸನಾಗಲಿ ಎಂದು ಶ್ರೀ ನಿಂಗರಾಯ ದೇವರಲ್ಲಿ ಪ್ರಾರ್ಥಿಸಲಾಯಿತು.

ಜಾತ್ರಾ ಮಹೋತ್ಸವವು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಜನರನ್ನು ಒಗ್ಗೂಡಿಸುವ ಹಾಗೂ ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಮತ್ತು ಭಕ್ತಿಯ ಸೊಬಗನ್ನು ಪ್ರತಿಬಿಂಬಿಸುವ ಮಹತ್ವದ ಉತ್ಸವವಾಗಿದೆ. ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಪೂಜೆ, ಹರಕೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಭಕ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande