
ಹಾಸನ, 06 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ಸೆ. 19ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.
ಲೋಕ ಅದಾಲತ್‌ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ವ್ಯಾಜ್ಯಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್, ಬ್ಯಾಂಕ್ ಸಾಲ ವಸೂಲಾತಿ, ಮೋಟಾರು ವಾಹನ, ಕೌಟುಂಬಿಕ, ಭೂಸ್ವಾಧೀನ, ಕಂದಾಯ, ಜನನ–ಮರಣ ನೋಂದಣಿ, ಜೀವನಾಂಶ ಹಾಗೂ ಇತರೆ ಲಘು ಕ್ರಿಮಿನಲ್ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಅಲ್ಲದೆ, ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳಿಗೂ ಇತ್ಯರ್ಥಕ್ಕೆ ಅವಕಾಶವಿದೆ. ಸಂಬಂಧಪಟ್ಟ ಕಕ್ಷಿದಾರರು ವಕೀಲರ ಮೂಲಕ ಅಥವಾ ಖುದ್ದಾಗಿ ಭಾಗವಹಿಸಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು. ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಹಾಸನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.