ಸಿದ್ದರಾಮಯ್ಯರದ್ದು ಬಡವರು, ಧ್ವನಿ ಇಲ್ಲದವರ ಪರ ಹೋರಾಟದ ರಾಜಕಾರಣ: ಪರಮೇಶ್ವರ
ಬೆಂಗಳೂರು, 06 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಚಿಂತನೆಯನ್ನು ಹುಟ್ಟುಹಾಕಿದ ನಾಯಕ. ಅಹಿಂದ ಹೋರಾಟದ ಮೂಲಕ ನಿರ್ಲಕ್ಷ್ಯಕ್ಕೆ ಒಳಗಾದ ಜಾತಿಗಳು ಹಾಗೂ ಧ್ವನಿ ಇಲ್ಲದ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ ಎಂದು ಉಪಮು
ಪರಮೇಶ್ವರ


ಬೆಂಗಳೂರು, 06 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಚಿಂತನೆಯನ್ನು ಹುಟ್ಟುಹಾಕಿದ ನಾಯಕ. ಅಹಿಂದ ಹೋರಾಟದ ಮೂಲಕ ನಿರ್ಲಕ್ಷ್ಯಕ್ಕೆ ಒಳಗಾದ ಜಾತಿಗಳು ಹಾಗೂ ಧ್ವನಿ ಇಲ್ಲದ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದರು.

ಬೆಂಗಳೂರು ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ‘ರಜತ ಮಹೋತ್ಸವ ಹಾಗೂ ಹಿಂದುಳಿದ ಜಾತಿಗಳ ಬೃಹತ್ ಜನಜಾಗೃತಿ ಸಮಾವೇಶ’ದಲ್ಲಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಅವರದ್ದು ಬಡವರು ಹಾಗೂ ಧ್ವನಿ ಇಲ್ಲದವರ ಪರ ಹೋರಾಟದ ರಾಜಕಾರಣ. ಬಸವಣ್ಣನವರ ತತ್ವ-ಸಿದ್ಧಾಂತ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಮೈಗೂಡಿಸಿಕೊಂಡು ಸಾಮಾಜಿಕ ನ್ಯಾಯಕ್ಕಾಗಿ ಕೆಲಸ ಮಾಡಿದ್ದಾರೆ ಎಂದರು.

ಗ್ಯಾರಂಟಿ ಯೋಜನೆಗಳ ಮೂಲಕ ಬಡ ಹಾಗೂ ಸಂಕಷ್ಟದಲ್ಲಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡುವ ಪ್ರಯತ್ನ ಮಾಡಲಾಗಿದೆ. ಆರಂಭದಲ್ಲಿ ಟೀಕಿಸಿದವರೇ ನಂತರ ಇದೇ ರೀತಿಯ ಯೋಜನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದರು.

ದೇಶದಲ್ಲಿರುವ ಅಸಮಾನತೆ ಮತ್ತು ಜಾತಿ ವ್ಯವಸ್ಥೆ ನಿರ್ಮೂಲನೆಯಾಗದೆ ನಿಜವಾದ ಅಭಿವೃದ್ಧಿ ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಸಮಾನತೆ ಮತ್ತು ನ್ಯಾಯ ದೊರೆಯಬೇಕು. ಹಿಂದುಳಿದ ವರ್ಗಗಳ ಶೈಕ್ಷಣಿಕ ಹಾಗೂ ಸಾಮಾಜಿಕ ಪ್ರಗತಿಗಾಗಿ ಸಂಘಟನೆಗಳು ತಮ್ಮ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಬೇಕು ಎಂದು ಪರಮೇಶ್ವರ ಕರೆ ನೀಡಿದರು.

ಎಲ್ಲ ಜಾತಿ ಸಮುದಾಯಗಳು ಒಗ್ಗಟ್ಟಾಗಿ ಕೆಲಸ ಮಾಡಿದರೆ ಆಡಳಿತದಲ್ಲಿ ಹಿಂದುಳಿದ ವರ್ಗಗಳ ಪ್ರಾತಿನಿಧ್ಯವನ್ನು ಬಲಪಡಿಸಬಹುದು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಮಾನತೆಯ ಸಂಕಲ್ಪದೊಂದಿಗೆ ಹೋರಾಟ ಮುಂದುವರಿಸೋಣ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಸಂತೋಷ್ ಲಾಡ್, ಪುಟ್ಟರಂಗ ಶೆಟ್ಟಿ, ಬೈರತಿ ಸುರೇಶ್, ಮಧು ಬಂಗಾರಪ್ಪ, ಡಾ. ಅಜಯ್ ಸಿಂಗ್ ಸೇರಿದಂತೆ ಹಲವು ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande