
ಚಿಕ್ಕಮಗಳೂರು, 06 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಭದ್ರಾ ಮೇಲ್ದಂಡೆ ಯೋಜನೆಯಡಿ ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮಕ್ಕೆ ಭದ್ರಾ ಮೇಲ್ದಂಡೆ ಯೋಜನೆಯ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಇನ್‌ಟೇಕ್ ಪಾಯಿಂಟ್‌ನಲ್ಲಿ ಭಾನುವಾರ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ಹೊಸದುರ್ಗ ಶಾಸಕ ಡಾ. ಎಂ. ಚಂದ್ರಪ್ಪ, ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ತರೀಕೆರೆ ಶಾಸಕ ಶ್ರೀನಿವಾಸ್, ಶಿರಾ ಶಾಸಕ ಟಿ.ಬಿ. ಜಯಚಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.