
ಮಂಡ್ಯ, 06 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಅನ್ನು ಮುರಿಯುಕೊಂಡು ಸರ್ವಿಸ್ ರಸ್ತೆಗೆ ನುಗ್ಗಿರುವ ಘಟನೆ ಮಂಡ್ಯ ತಾಲ್ಲೂಕಿನ ಹಳೇ ಬೂದನೂರು ಬಳಿ ಸಂಭವಿಸಿದೆ.
ಕೇರಳ ರಾಜ್ಯದ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅತಿ ವೇಗ ಮತ್ತು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ಶಂಕಿಸಲಾಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ತೀವ್ರ ವೇಗದಲ್ಲಿ ಬಂದು ಹೆದ್ದಾರಿಯ ಮಧ್ಯದ ಡಿವೈಡರ್ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯ ಪಕ್ಕದ ಸರ್ವಿಸ್ ರಸ್ತೆಗೆ ಉರುಳಿಬಿದ್ದಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಮತ್ತು ಹೆದ್ದಾರಿ ಗಸ್ತು ಸಿಬ್ಬಂದಿ, ಗಾಯಗೊಂಡವರನ್ನು ತಕ್ಷಣವೇ ಚಿಕಿತ್ಸೆಗಾಗಿ ಮಂಡ್ಯದ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಗಾಯಾಳುಗಳಿಗೆ ವೈದ್ಯಕೀಯ ಚಿಕಿತ್ಸೆ ಮುಂದುವರಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಈ ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R