ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಯಶಸ್ವಿ
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ
bengaluru-police-constable-recruitment-exam-success


ಬೆಂಗಳೂರು, 06ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ನಗರದಾದ್ಯಂತ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್-ಡಿಎಆರ್) ಹುದ್ದೆಗಳ ನೇಮಕಾತಿ ಪರೀಕ್ಷೆಯು ಬಿಗಿ ಭದ್ರತೆ ಹಾಗೂ ಯಾವುದೇ ಅಡೆತಡೆಗಳಿಲ್ಲದೆ ಇಂದು ಯಶಸ್ವಿಯಾಗಿ ನಡೆಯಿತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಒಟ್ಟು 3,991 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ಈ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರಿನ ವಿವಿಧ ಕೇಂದ್ರಗಳಲ್ಲಿ ಬೆಳಗ್ಗೆ 10:30ಕ್ಕೆ ನಿಗದಿಯಂತೆ ಆರಂಭವಾಯಿತು. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ತಡೆಯಲು ಆಡಳಿತ ಮಂಡಳಿಯು ಕಾವಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿತ್ತು.

ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವ ಮುನ್ನವೇ ಅಗತ್ಯ ಮಾರ್ಗಸೂಚಿಗಳನ್ನು ನೀಡಲಾಗಿತ್ತು. ಅಲ್ಲದೆ, ಪರೀಕ್ಷಾರ್ಥಿಗಳು ನಿಗದಿತ ಸಮಯಕ್ಕೆ ಕೇಂದ್ರಗಳನ್ನು ತಲುಪಲು ಅನುಕೂಲವಾಗುವಂತೆ ಬೆಂಗಳೂರು ಸಂಚಾರ ಪೊಲೀಸರು ಮುಂಜಾನೆಯಿಂದಲೇ ಸೂಕ್ತ ಸಂಚಾರ ವ್ಯವಸ್ಥೆ ಹಾಗೂ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರು. ಅಧಿಕಾರಿಗಳ ಮಾಹಿತಿಯಂತೆ, ಪರೀಕ್ಷೆಯು ಯಾವುದೇ ಸಮಸ್ಯೆಯಿಲ್ಲದೆ ಸುಗಮವಾಗಿ ಮುಕ್ತಾಯಗೊಂಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande