ಅಹಿಂದ ಹೋರಾಟದ ಮೂಲಕ ಶೋಷಿತ ಸಮುದಾಯಗಳಿಗೆ ಶಕ್ತಿ ತುಂಬಿದ ನಾಯಕ ಸಿದ್ದರಾಮಯ್ಯ: ಡಿಸಿಎಂ ಪರಮೇಶ್ವರ
ಬೆಂಗಳೂರು, 06ಸೆಪ್ಟೆಂಬರ್(ಹಿ.ಸ.) ಆ್ಯಂಕರ್: ಅಹಿಂದ ಹೋರಾಟದ ಮೂಲಕ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಹಾಗೂ ಆರ್ಥಿಕ ಶಕ್ತಿ ತುಂಬಿದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಬಣ್ಣಿಸಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತ
siddaramaiah-empowered-marginalized-communities-through-ahinda-movement-says-dcm-parameshwara


ಬೆಂಗಳೂರು, 06ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ಅಹಿಂದ ಹೋರಾಟದ ಮೂಲಕ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಹಾಗೂ ಆರ್ಥಿಕ ಶಕ್ತಿ ತುಂಬಿದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಬಣ್ಣಿಸಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ‘ರಜತ ಮಹೋತ್ಸವ ಹಾಗೂ ಹಿಂದುಳಿದ ಜಾತಿಗಳ ಜನ ಜಾಗೃತಿ ಸಮಾವೇಶ’ ಮತ್ತು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿದ್ದರಾಮಯ್ಯ ರಾಜ್ಯ ಕಂಡ ಅಪರೂಪದ ರಾಜಕಾರಣಿ. ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ-ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಬಡವರು ಹಾಗೂ ಧ್ವನಿ ಇಲ್ಲದವರಿಗಾಗಿ ಅವರು ಸದಾ ಹೋರಾಟ ನಡೆಸುತ್ತಾ ಬಂದಿದ್ದಾರೆ. ಡಿ. ದೇವರಾಜ ಅರಸು ಮತ್ತು ಹಾವನೂರು ಅವರ ಹಾದಿಯಲ್ಲೇ ಸಾಗಿ ಹಿಂದುಳಿದ ವರ್ಗಗಳಿಗೆ ಸಂವಿಧಾನಾತ್ಮಕ ಹಕ್ಕುಗಳನ್ನು ಕಲ್ಪಿಸಿಕೊಡುವಲ್ಲಿ ಅವರ ಬದ್ಧತೆ ಅನನ್ಯ ಎಂದು ಪ್ರಶಂಸಿಸಿದರು.

ಗ್ಯಾರಂಟಿ ಯೋಜನೆಗಳ ಪ್ರಶಂಸೆ: ಕಷ್ಟದಲ್ಲಿರುವ ಸಮುದಾಯಗಳಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಲು ದೇಶದಲ್ಲೇ ಪ್ರಥಮ ಬಾರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಆರಂಭದಲ್ಲಿ ಇವುಗಳನ್ನು ಟೀಕಿಸಿದವರೇ ಇಂದು ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದ್ದಾರೆ.

ಅಸಮಾನತೆ ವಿರುದ್ಧ ಹೋರಾಟ: ಶ್ರೇಣಿಕೃತ ವ್ಯವಸ್ಥೆಯಿಂದಾಗಿ ದೇಶವು ಉಳ್ಳವರು ಹಾಗೂ ಬಡವರು ಎಂದು ಎರಡು ಭಾಗವಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಆಶಯದಂತೆ 21ನೇ ಶತಮಾನದ ಭಾರತದಲ್ಲಿ ಅಸಮಾನತೆ ಹಾಗೂ ಜಾತಿ ಪದ್ಧತಿ ನಿರ್ಮೂಲನೆಯಾಗಬೇಕು ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande