
ಬೆಂಗಳೂರು, 06ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ನಮ್ಮಲ್ಲಿರುವ ಪ್ರತಿಭಾವಂತ ಮಾನವ ಸಂಪನ್ಮೂಲ ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿಲ್ಲ. ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಕಲಿಯಬೇಕು, ಕೇವಲ ಉದ್ಯೋಗಿಗಳಾಗದೆ ಉದ್ಯೋಗದಾತರಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ “ವಿದೇಶದಲ್ಲಿ ಅಧ್ಯಯನ 2026” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ನೇತೃತ್ವದಲ್ಲಿ ಸಾಗರೋತ್ತರ ಜ್ಞಾನ ಬೆಸೆಯುವ ಕಾರ್ಯ ಅತ್ಯುತ್ತಮವಾಗಿ ನಡೆಯುತ್ತಿದೆ ಎಂದರು.ಕಾರ್ಯಕ್ರಮದ ಪ್ರಮುಖ ಮುಖ್ಯಾಂಶಗಳುಅವಕಾಶಗಳು: ರಾಜ್ಯದ 3,145 ವಿದ್ಯಾರ್ಥಿಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಲು ಆಯ್ಕೆ ಮಾಡಲಾಗಿದೆ.
ವಿಶ್ವವಿದ್ಯಾಲಯಗಳು ಮತ್ತು ವಿಷಯಗಳು: ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಭಾಗವಹಿಸಿದ್ದು, 300ಕ್ಕೂ ಹೆಚ್ಚು ವಿಷಯಗಳಲ್ಲಿ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗಿದೆ.ಆರ್ಥಿಕ ನೆರವು: ಸರ್ಕಾರದ ವಿವಿಧ ಇಲಾಖೆಗಳಿಂದ ವಿಶೇಷ ವಿದ್ಯಾರ್ಥಿ ವೇತನ ಹಾಗೂ ವಿವಿಧ ಬ್ಯಾಂಕ್ಗಳ ಮೂಲಕ 2 ಕೋಟಿ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ.ಪ್ರಮುಖ ಒಡಂಬಡಿಕೆ: ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾಲಯದ ಜೊತೆ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ.
ಬೆಂಗಳೂರು ಜಾಗತಿಕ ನಗರವಾಗಿ ಬೆಳೆದಿರುವ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಡಿಸಿಎಂ, ಸಿಲಿಕಾನ್ ವ್ಯಾಲಿ ಕ್ಯಾಲಿಫೋರ್ನಿಯಾದಲ್ಲಿ 16 ಲಕ್ಷ ಐಟಿ ವೃತ್ತಿಪರರಿದ್ದರೆ, ಬೆಂಗಳೂರಿನಲ್ಲಿ 26 ಲಕ್ಷ ವೃತ್ತಿಪರರಿದ್ದಾರೆ. ಪ್ರತಿ ವರ್ಷ 1 ಲಕ್ಷಕ್ಕೂ ಹೆಚ್ಚು ಇಂಜಿನಿಯರ್ಗಳು ಮತ್ತು 13,940 ವೈದ್ಯರನ್ನು ಉತ್ಪಾದಿಸುವ ಮೂಲಕ ಕರ್ನಾಟಕ ದೇಶದ ಜ್ಞಾನದ ಕೇಂದ್ರವಾಗಿದೆ ಎಂದು ವಿವರಿಸಿದರು. ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರಂತೆ ವಿದೇಶದಲ್ಲಿ ಓದಿ ದೇಶ ಮುನ್ನಡೆಸಿದ ನಾಯಕರ ಹಾದಿಯಲ್ಲಿ ಇಂದಿನ ಯುವಜನತೆ ಸಾಗಬೇಕು ಎಂದರು.
ಪೋಷಕರು ಮತ್ತು ಗುರುಗಳನ್ನು ಸ್ಮರಿಸಿದ ಅವರು, ಯಾರೂ ಕಸಿಯಲಾಗದ ಅತ್ಯುತ್ತಮ ಆಸ್ತಿ ವಿದ್ಯೆ. ವಿದ್ಯಾರ್ಥಿಗಳು ತಮ್ಮ ಮೂಲ, ಪೋಷಕರು ಹಾಗೂ ಗುರುಗಳನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು. ಶಿಕ್ಷಕರಿಗೆ ಗೌರವ ಸಲ್ಲಿಸುವ ಸಲುವಾಗಿ ಅವರ ಹೆಸರಿನ ಮುಂದೆ Tr. ಎಂದು ಸೇರಿಸಲು ಸರ್ಕಾರ ತೀರ್ಮಾನಿಸಿರುವುದನ್ನು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R