ಕುರುಗೋಡಿನಲ್ಲಿ ಸೆಪ್ಟೆಂಬರ್ 9 ರಂದು ಅಂಬೇಡ್ಕರ್ ಓದು ಕಾರ್ಯಕ್ರಮ
ಕುರುಗೋಡು, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕುರುಗೋಡು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆಪ್ಟೆಂಬರ್ 09 ರಂದು ಬೆಳಿಗ್ಗೆ 11 ಗಂಟೆಗೆ ‘ಅಂಬೇಡ್ಕರ್ ಓದು’ – ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಬದುಕು ಮತ್ತು ಸಾಧನೆಗಳ ಪರಿಚಯ ಕಾ
ಕುರುಗೋಡಿನಲ್ಲಿ ಸೆಪ್ಟೆಂಬರ್ 9 ರಂದು ‘ಅಂಬೇಡ್ಕರ್ ಓದು’


ಕುರುಗೋಡು, 07 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕುರುಗೋಡು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆಪ್ಟೆಂಬರ್ 09 ರಂದು ಬೆಳಿಗ್ಗೆ 11 ಗಂಟೆಗೆ ‘ಅಂಬೇಡ್ಕರ್ ಓದು’ – ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಬದುಕು ಮತ್ತು ಸಾಧನೆಗಳ ಪರಿಚಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಣೆ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕುರುಗೋಡು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಮಸೂತಿ ನೆರವೇರಿಸುವರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಶಾಂತಲ ಅಧ್ಯಕ್ಷತೆ ವಹಿಸಲಿದ್ದು, ಬಳ್ಳಾರಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮಹತಾಬ್ ವಿಶೇಷ ಉಪನ್ಯಾಸ ನೀಡುವರು.

ಮುಖ್ಯ ಅತಿಥಿಗಳಾಗಿ ಕಾಲೇಜಿನ ರಾಜ್ಯಶಾಸ್ತ ವಿಭಾಗದ ಮುಖ್ಯಸ್ಥ ಮಧುಸೂಧನ್ ಎನ್. ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ತಿಪ್ಪೇರುದ್ರ ಸಂಡೂರು ಉಪಸ್ಥಿತರಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande