ಸೆ.09, 10 ರಂದು ಬಳ್ಳಾರಿ ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ
ಬಳ್ಳಾರಿ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಬೆಂಗಳೂರು ಮತ್ತು ಬಳ್ಳಾರಿ, ಜಿಲ್ಲಾ ಪ್ರಾಂಶುಪಾಲರ ಸಂಘ ಹಾಗೂ ನಂದಿ ಸಿಟಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಸೆ.09 ಮತ್ತು 10 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಳ್ಳಾರಿ ತಾಲೂಕು ಪದವಿ ಪೂರ್ವ
ಸೆ.09, 10 ರಂದು ಬಳ್ಳಾರಿ ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ


ಸೆ.09, 10 ರಂದು ಬಳ್ಳಾರಿ ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ


ಸೆ.09, 10 ರಂದು ಬಳ್ಳಾರಿ ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ


ಬಳ್ಳಾರಿ, 07 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಬೆಂಗಳೂರು ಮತ್ತು ಬಳ್ಳಾರಿ, ಜಿಲ್ಲಾ ಪ್ರಾಂಶುಪಾಲರ ಸಂಘ ಹಾಗೂ ನಂದಿ ಸಿಟಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಸೆ.09 ಮತ್ತು 10 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಳ್ಳಾರಿ ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ-2026 ಹಮ್ಮಿಕೊಳ್ಳಲಾಗಿದೆ.

ಸೆಪ್ಟೆಂಬರ್ 09 ರಂದು ಬೆಳಿಗ್ಗೆ 09.30 ಗಂಟೆಗೆ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು.

ಸಂಸದ ಈ.ತುಕಾರಾಮ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಡಾ.ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ವಿಧಾನಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ ಕ್ರೀಡಾಕೂಟಗಳ ಸಂಘಟನಾ ಕಾರ್ಯದರ್ಶಿ ಅನಿತ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೆರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹೆಚ್.ಎನ್. ಶಿವರಾಜ್, ಉಪಾಧ್ಯಕ್ಷರಾದ ಬಿ.ಸುಲೇಖ, ಕಾರ್ಯದರ್ಶಿ ಪಿ. ನಾಗೇಶ್ವರ ರಾವ್ ಮತ್ತು ಕಾರ್ಯಾಧ್ಯಕ್ಷರಾದ ಎಂ. ಶ್ರೀಶೈಲ ಸೇರಿದಂತೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ವರ್ಗದವರು, ಕ್ರೀಡಾಪಟುಗಳು ಹಾಗೂ ಇತರರು ಉಪಸ್ಥಿತರಿರುವರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹನುಮಂತ ರಾವ್ ಎಂ.ವಿ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande