ಸತ್ಯ ನಿಕೇತನ ಕಟ್ಟಡ ಕುಸಿತ: ಹೊಣೆಗಾರಿಕೆ ಕೊರತೆ; ರಾಹುಲ್ ಗಾಂಧಿ
ನವದೆಹಲಿ, 07 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೆಹಲಿಯ ಸತ್ಯ ನಿಕೇತನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವಘಡಗಳಿಗೆ ಹೊಣೆಗಾರಿಕೆ ನಿಗದಿಪಡಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ
नई दिल्ली में कांग्रेस मुख्यालय में पत्रकार वार्ता के दौरान लोकसभा में नेता प्रतिपक्ष राहुल गांधी।


ನವದೆಹಲಿ, 07 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ದೆಹಲಿಯ ಸತ್ಯ ನಿಕೇತನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವಘಡಗಳಿಗೆ ಹೊಣೆಗಾರಿಕೆ ನಿಗದಿಪಡಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಅವರು, ಘಟನೆಗಳ ತಡೆಗಟ್ಟುವಲ್ಲಿ ವಿಫಲವಾದ ಬಳಿಕ ಸರ್ಕಾರ ಕೇವಲ ಹೇಳಿಕೆಗಳಿಗೆ ಸೀಮಿತವಾಗುತ್ತದೆ. ನಿಜವಾದ ತಪ್ಪಿತಸ್ಥರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಸೋಮವಾರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಸತ್ಯ ನಿಕೇತನದಲ್ಲಿ ವಿದ್ಯಾರ್ಥಿಗಳಿದ್ದ ಕಟ್ಟಡ ಕುಸಿದಿರುವುದು ಏಕೈಕ ದುರಂತವಲ್ಲ ಎಂದು ಹೇಳಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ಸೈದುಲಾಜಾಬ್ ಮತ್ತು ಹೌಜ್ ರಾಣಿ ಪ್ರದೇಶಗಳಲ್ಲೂ ಇಂತಹ ಘಟನೆಗಳು ನಡೆದಿದ್ದು, ಹಲವು ಮಂದಿ ಮೃತಪಟ್ಟಿದ್ದಾರೆ. ಆದರೆ ಈ ಘಟನೆಗಳ ಬಳಿಕ ಪರಿಣಾಮಕಾರಿ ಕ್ರಮ ಕಂಡುಬರುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಹೊಣೆಗಾರಿಕೆ ನಿಗದಿಪಡಿಸುವಂತೆ ಪ್ರಶ್ನಿಸುವವರನ್ನು ಅವಹೇಳನಕಾರಿ ಪದಗಳಿಂದ ಮೌನಗೊಳಿಸುವ ಪ್ರಯತ್ನ ನಡೆಯುತ್ತಿದೆ. ಪ್ರಶ್ನೆ ಎತ್ತುವವರನ್ನೇ ನಾಚಿಕೆಪಡಿಸುವ ಹಾಗೂ ಅಪಪ್ರಚಾರ ಮಾಡುವ ಮೂಲಕ ಅವರ ಧ್ವನಿಯನ್ನು ಅಡಗಿಸಲು ಯತ್ನಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕಳೆದ 12 ವರ್ಷಗಳಲ್ಲಿ ಸರ್ಕಾರ ಹಲವು ದೊಡ್ಡ ದೊಡ್ಡ ಭರವಸೆಗಳು ಮತ್ತು ಹೇಳಿಕೆಗಳನ್ನು ನೀಡಿದೆ. ಆದರೆ ಮೂಲಭೂತ ಸಮಸ್ಯೆಗಳತ್ತ ಅಗತ್ಯ ಗಮನ ನೀಡಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿಯಲ್ಲಿ ‘ತ್ರಿವಳಿ ಎಂಜಿನ್’ ಸರ್ಕಾರವಿದ್ದರೂ ಇಂತಹ ದುರಂತಗಳಿಗೆ ಹೊಣೆಗಾರಿಕೆ ನಿಗದಿಪಡಿಸುವಲ್ಲಿ ಪರಿಣಾಮಕಾರಿ ಕ್ರಮ ಕಾಣುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande