ಶ್ರಾವಣ ಮಾಸದ ಕೊನೆಯ ಸೋಮವಾರ: ಸಿದ್ದೇಶ್ವರ ಮಂದಿರದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಪೂಜೆ
ಬೆಳಗಾವಿ, 07 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಕಂಗ್ರಾಳಿ ಬಿ.ಕೆ. ಗ್ರಾಮದ ಕಲ್ಮೇಶ್ವರ ನಗರದಲ್ಲಿರುವ ಶ್ರೀ ಸಿದ್ದೇಶ್ವರ ಮಂದಿರದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ನಡೆದ ಕಳಸ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾ
ಸಿದ್ದೇಶ್ವರ ಮಂದಿರದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಪೂಜೆ


ಬೆಳಗಾವಿ, 07 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಕಂಗ್ರಾಳಿ ಬಿ.ಕೆ. ಗ್ರಾಮದ ಕಲ್ಮೇಶ್ವರ ನಗರದಲ್ಲಿರುವ ಶ್ರೀ ಸಿದ್ದೇಶ್ವರ ಮಂದಿರದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ನಡೆದ ಕಳಸ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.

ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕಳಸ ಪೂಜೆಯಲ್ಲಿ ಭಾಗವಹಿಸಿದ ಅವರು, ನಾಡಿನ ಜನರ ಸುಖ, ಶಾಂತಿ, ಆರೋಗ್ಯ, ಸಮೃದ್ಧಿ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು. ಈ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮಸ್ಥರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಬಳಿಕ ದೇವಸ್ಥಾನದ ನಿರ್ಮಾಣ ಹಾಗೂ ಜೀರ್ಣೋದ್ಧಾರ ಕಾಮಗಾರಿಗಳನ್ನು ವೀಕ್ಷಿಸಿದ ಲಕ್ಷ್ಮೀ ಹೆಬ್ಬಾಳಕರ್, ದೇವಸ್ಥಾನದ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕಾಗಿ ಸರ್ಕಾರದಿಂದ ₹50 ಲಕ್ಷ ವಿಶೇಷ ಅನುದಾನ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗ್ರಾಮೀಣ ಪ್ರದೇಶಗಳ ಧಾರ್ಮಿಕ ಕೇಂದ್ರಗಳು ಪೂಜಾ ಸ್ಥಳಗಳ ಜತೆಗೆ ಜನರನ್ನು ಒಗ್ಗೂಡಿಸುವ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗಿವೆ. ಇಂತಹ ಪವಿತ್ರ ಸ್ಥಳಗಳ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದು ತಮ್ಮ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ದೇವಸ್ಥಾನದ ನಿರ್ಮಾಣ ಕಾಮಗಾರಿಗಳು ಶೀಘ್ರ ಪೂರ್ಣಗೊಂಡು ಹೆಚ್ಚಿನ ಭಕ್ತರಿಗೆ ಅನುಕೂಲವಾಗಲಿ ಎಂದು ಅವರು ಹಾರೈಸಿದರು. ಸರ್ಕಾರದ ನೆರವಿನಿಂದ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಗ್ರಾಮಸ್ಥರು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಉಮೇಶ್ ನಾಯಕ್, ಲೋಹಿತ್, ರಮೇಶ್ ವಡರಟ್ಟಿ, ಸಾಗರ್ ಪಮ್ಮಾರ್, ಉಮೇಶ್ ಗದಗ, ಚೇತನ್ ಹಾಗೂ ಸಿದ್ದರಾಯಿ ಸೇರಿದಂತೆ ಮಹಿಳೆಯರು, ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande