ಶ್ರಾವಣ ಮಾಸದ ಕೊನೆಯ ಸೋಮವಾರ: ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ವಿಠಲ್ ಕಟಕದೊಂಡ
ವಿಜಯಪುರ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಜಯಪುರ ನಗರದ ಅಲ್ಲಾಪುರ ಓಣಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜಾ ಸಮಾರಂಭವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ್ ಕಟಕದೊಂಡ ಅ
ಪೂಜೆ


ವಿಜಯಪುರ, 07 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಜಯಪುರ ನಗರದ ಅಲ್ಲಾಪುರ ಓಣಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜಾ ಸಮಾರಂಭವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ್ ಕಟಕದೊಂಡ ಅವರು ಭಾಗವಹಿಸಿ, ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಶ್ರಾವಣ ಮಾಸವು ಹಿಂದೂ ಧಾರ್ಮಿಕ ಪರಂಪರೆಯಲ್ಲಿ ಅತ್ಯಂತ ಪವಿತ್ರ ಹಾಗೂ ಮಹತ್ವದ ಮಾಸವಾಗಿದ್ದು, ಈ ಅವಧಿಯಲ್ಲಿ ಶಿವನ ಆರಾಧನೆ, ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತರು ಶ್ರದ್ಧಾ-ಭಕ್ತಿಯಿಂದ ನೆರವೇರಿಸುತ್ತಾರೆ. ಅದರಂತೆ ಶ್ರಾವಣ ಮಾಸದ ಕೊನೆಯ ಸೋಮವಾರದಂದು ಅಲ್ಲಾಪುರ ಓಣಿಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಾಸಕ ವಿಠಲ್ ಕಟಕದೊಂಡ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ವಿಶೇಷವಾಗಿ ರೈತಾಪಿ ವರ್ಗದ ಜನರ ಬದುಕು ಹಸನಾಗಲಿ, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಉತ್ತಮ ಮಳೆ-ಬೆಳೆ ಆಗಲಿ, ರೈತರು ಸಮೃದ್ಧಿ ಹಾಗೂ ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಅವರು ತಿಳಿಸಿದರು.

“ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಕರುಣಿಸಲಿ. ರೈತಾಪಿ ಜನರ ಸಂಕಷ್ಟಗಳು ದೂರವಾಗಿ, ಕೃಷಿ ಕ್ಷೇತ್ರದಲ್ಲಿ ಸಮೃದ್ಧಿ ನೆಲೆಸಲಿ. ಈ ಭಾಗದ ಜನರ ಬದುಕು ಇನ್ನಷ್ಟು ಸುಖಮಯವಾಗಲಿ” ಎಂದು ಶ್ರೀ ಮಲ್ಲಿಕಾರ್ಜುನ ಸ್ವಾಮಿಯಲ್ಲಿ ಭಕ್ತಿಯಿಂದ ಬೇಡಿಕೊಳ್ಳಲಾಯಿತು ಎಂದು ಶಾಸಕ ವಿಠಲ್ ಕಟಕದೊಂಡ ಹೇಳಿದರು.

ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು ಶ್ರಾವಣ ಮಾಸದ ಕೊನೆಯ ಸೋಮವಾರದ ವಿಶೇಷ ಪೂಜೆಯಲ್ಲಿ ಭಾಗವಹಿಸಿ, ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆದು ಪುನೀತರಾದರು. ದೇವಸ್ಥಾನದಲ್ಲಿ ಭಕ್ತರ ಉಪಸ್ಥಿತಿಯಿಂದ ಧಾರ್ಮಿಕ ವಾತಾವರಣ ನಿರ್ಮಾಣವಾಗಿತ್ತು.

ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ನಡೆದ ಈ ವಿಶೇಷ ಪೂಜಾ ಕಾರ್ಯಕ್ರಮವು ಭಕ್ತಿ, ಧಾರ್ಮಿಕ ಶ್ರದ್ಧೆ ಹಾಗೂ ನಾಡಿನ ಒಳಿತಿಗಾಗಿ ಪ್ರಾರ್ಥನೆಯೊಂದಿಗೆ ಅರ್ಥಪೂರ್ಣವಾಗಿ ನೆರವೇರಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande