
ವಿಜಯಪುರ, 07 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಸರೂರು ಗ್ರಾಮದ ಶ್ರೀ ರೇವಣಸಿದ್ಧೇಶ್ವರ ದೇವಸ್ಥಾನಕ್ಕೆ ಕ್ಷೇತ್ರದ ಶಾಸಕ ಅಪ್ಪಾಜಿಗೌಡ ಅವರು ಭೇಟಿ ನೀಡಿ, ಶ್ರೀ ರೇವಣಸಿದ್ಧೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಪಾವಿತ್ರ್ಯತೆ ಹಾಗೂ ಧಾರ್ಮಿಕ ಮಹತ್ವವನ್ನು ಸ್ಮರಿಸಿದ ಶಾಸಕರು, ನಾಡಿನ ಜನತೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯದಿಂದ ಬಾಳಲಿ ಎಂದು ಶ್ರೀ ರೇವಣಸಿದ್ಧೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸಿದರು. ದೇವರ ದರ್ಶನ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಭಕ್ತಿಭಾವದಿಂದ ಪಾಲ್ಗೊಂಡು, ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಆಶೀರ್ವಾದ ಕೋರಿದರು.
ಶ್ರೀ ರೇವಣಸಿದ್ಧೇಶ್ವರ ದೇವಸ್ಥಾನವು ಸರೂರು ಗ್ರಾಮದ ಪ್ರಮುಖ ಧಾರ್ಮಿಕ ಕೇಂದ್ರವಾಗಿದ್ದು, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ. ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರನ್ನು ಸ್ಥಳೀಯರು ಹಾಗೂ ಭಕ್ತರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಕ್ತರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande