ಯರಗಲ್ ಬಿ ಕೆ ಗ್ರಾಮದಲ್ಲಿ ರುಕ್ಮಿಣಿ ಪಾಂಡುರಂಗ ವಿಠ್ಠಲ ಮಂದಿರದ ಮೂರ್ತಿ ಪ್ರಾಣ ಪ್ರತಿಷ್ಠಾಪನೆ
ವಿಜಯಪುರ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಬಿ ಕೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರುಕ್ಮಿಣಿ ಪಾಂಡುರಂಗ ವಿಠ್ಠಲ ಮಂದಿರದ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದ ವಾತಾವರಣದಲ್ಲಿ
ಪೂಜೆ


ವಿಜಯಪುರ, 07 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಬಿ ಕೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರುಕ್ಮಿಣಿ ಪಾಂಡುರಂಗ ವಿಠ್ಠಲ ಮಂದಿರದ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದ ವಾತಾವರಣದಲ್ಲಿ ಜರುಗಿತು.

ಸಮಾರಂಭದಲ್ಲಿ ಸಿಂದಗಿ ಕ್ಷೇತ್ರದ ಶಾಸಕ ಅಶೋಕ್ ಮನಗೂಳಿ ಅವರು ಭಾಗವಹಿಸಿ, ಧಾರ್ಮಿಕ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನೂತನ ಮಂದಿರ ನಿರ್ಮಾಣಗೊಂಡಿರುವುದು ಗ್ರಾಮಸ್ಥರಿಗೆ ಹಾಗೂ ಸುತ್ತಮುತ್ತಲಿನ ಭಕ್ತರಿಗೆ ಸಂತಸದ ಸಂಗತಿಯಾಗಿದೆ. ದೇವಾಲಯಗಳು ಕೇವಲ ಪೂಜಾ ಸ್ಥಳಗಳಾಗಿರದೆ, ಜನರಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಭಾವನೆಗಳನ್ನು ಬೆಳೆಸುವ ಪ್ರಮುಖ ಕೇಂದ್ರಗಳಾಗಿವೆ. ಇಂತಹ ಧಾರ್ಮಿಕ ಕೇಂದ್ರಗಳ ನಿರ್ಮಾಣದಿಂದ ಗ್ರಾಮದಲ್ಲಿ ಆಧ್ಯಾತ್ಮಿಕ ವಾತಾವರಣ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.

ರುಕ್ಮಿಣಿ ಪಾಂಡುರಂಗ ವಿಠ್ಠಲನ ಆರಾಧನೆಗೆ ವಿಶೇಷ ಮಹತ್ವವಿದ್ದು, ಮಂದಿರದ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣದಂತಹ ಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದರು. ನೂತನ ಮಂದಿರವು ಗ್ರಾಮಸ್ಥರ ಶ್ರದ್ಧಾ-ಭಕ್ತಿಗೆ ಸಾಕ್ಷಿಯಾಗಿದ್ದು, ಮುಂದಿನ ದಿನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು, ಭಜನೆ, ಕೀರ್ತನೆ ಸೇರಿದಂತೆ ವಿವಿಧ ಆಧ್ಯಾತ್ಮಿಕ ಚಟುವಟಿಕೆಗಳಿಗೆ ಕೇಂದ್ರವಾಗಲಿ ಎಂದು ಆಶಿಸಿದರು.

ಗ್ರಾಮದ ಜನರು ಹಾಗೂ ಭಕ್ತರು ವಿಶೇಷ ಪೂಜೆ, ಧಾರ್ಮಿಕ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡು ಶ್ರೀ ರುಕ್ಮಿಣಿ ಪಾಂಡುರಂಗ ವಿಠ್ಠಲ ದೇವರ ದರ್ಶನ ಪಡೆದು ಪುನೀತರಾದರು. ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣದ ಅಂಗವಾಗಿ ಮಂದಿರದ ಆವರಣದಲ್ಲಿ ವಿಶೇಷ ಪೂಜೆ, ಮಂತ್ರೋಚ್ಚಾರಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಈ ಸಂದರ್ಭದಲ್ಲಿ ಗ್ರಾಮಸ್ಥರು, ಭಕ್ತರು, ಮುಖಂಡರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಶಾಸಕ ಅಶೋಕ್ ಮನಗೂಳಿ ಅವರು ಈ ಪವಿತ್ರ ಸಂದರ್ಭದಲ್ಲಿ ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಮಳೆ-ಬೆಳೆ ಕರುಣಿಸಲಿ ಎಂದು ಶ್ರೀ ರುಕ್ಮಿಣಿ ಪಾಂಡುರಂಗ ವಿಠ್ಠಲನಿಗೆ ಪ್ರಾರ್ಥಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande