ರಾಜ್ಯದ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, 07 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಬೆಂಗಳೂರು ನೈಋತ್ಯ ವಿಭಾಗದ ಉಪ ಪೊಲೀಸ್ ಆಯುಕ್ತೆ ಅನಿತಾ ಭೀಮಪ್ಪ ಹದ್ದಣ್ಣವರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಪರಾಧ ತನಿಖಾ ದಳದ (ಸಿಐಡಿ) ಪೊಲೀ
ವರ್ಗಾವಣೆ ಪತ್ರ


ಬೆಂಗಳೂರು, 07 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಬೆಂಗಳೂರು ನೈಋತ್ಯ ವಿಭಾಗದ ಉಪ ಪೊಲೀಸ್ ಆಯುಕ್ತೆ ಅನಿತಾ ಭೀಮಪ್ಪ ಹದ್ದಣ್ಣವರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಪರಾಧ ತನಿಖಾ ದಳದ (ಸಿಐಡಿ) ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಸ್ಯಾಮ್ ವರ್ಗೀಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಡಾ. ರಾಮ್ ಎಲ್. ಅರಸಿದ್ದಿ ಅವರನ್ನು ಬೆಂಗಳೂರು ನಗರ ಗುಪ್ತಚರ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ ಹುದ್ದೆ ನಿರೀಕ್ಷೆಯಲ್ಲಿದ್ದ ಕೆ. ಲಕ್ಷ್ಮೀ ಗಣೇಶ್ ಅವರನ್ನು ಬೆಂಗಳೂರು ನೈಋತ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ನೇಮಿಸಲಾಗಿದೆ.

ಸಿಐಡಿ ಪೊಲೀಸ್ ಅಧೀಕ್ಷಕರಾಗಿದ್ದ ಸ್ಯಾಮ್ ವರ್ಗೀಸ್ ಅವರನ್ನು ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಅಲ್ಲದೆ, ಸಿಐಡಿ ಪೊಲೀಸ್ ಅಧೀಕ್ಷಕ, ಬೆಂಗಳೂರು ನೈಋತ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ಹಾಗೂ ಬೆಂಗಳೂರು ನಗರ ಗುಪ್ತಚರ ವಿಭಾಗದ ಉಪ ಪೊಲೀಸ್ ಆಯುಕ್ತ ಹುದ್ದೆಗಳನ್ನು ಮಂಡ್ಯ ಪೊಲೀಸ್ ಅಧೀಕ್ಷಕರ ವೃಂದದ ಹುದ್ದೆಗೆ ಸಮಾನ ಸ್ಥಾನಮಾನ ಮತ್ತು ಜವಾಬ್ದಾರಿಯ ಹುದ್ದೆಗಳೆಂದು ಸರ್ಕಾರ ಘೋಷಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande