
ನವದೆಹಲಿ, 07 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಸತ್ಯ ನಿಕೇತನ ಕಟ್ಟಡ ಕುಸಿತದ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಸೋಮವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಹಾಗೂ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು.
ಘಟನೆಗೆ ಸಂಬಂಧಿಸಿದಂತೆ ಕಟ್ಟಡ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ದೆಹಲಿಯಲ್ಲಿ ಐದು ಮಹಡಿ ಹೊಂದಿರುವ ಕಟ್ಟಡಗಳನ್ನು ತಕ್ಷಣ ಸೀಲ್ ಮಾಡುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು. ನಿಯಮ ಉಲ್ಲಂಘನೆಗೆ ಕಾರಣರಾದ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸತ್ಯ ನಿಕೇತನ ಸುತ್ತಮುತ್ತಲಿನ ಪಿಜಿಗಳು ಹಾಗೂ ಕಟ್ಟಡಗಳನ್ನೂ ತೀವ್ರವಾಗಿ ಪರಿಶೀಲಿಸಿ, ನಿಯಮ ಉಲ್ಲಂಘನೆ ಕಂಡುಬಂದರೆ ಸೀಲ್ ಮಾಡುವಂತೆ ನಿರ್ದೇಶಿಸಿದರು. ದೆಹಲಿಯ ಜನರ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ. ನಿರ್ಲಕ್ಷ್ಯ ತೋರುವ ಯಾರನ್ನೂ ಬಿಡುವುದಿಲ್ಲ ಎಂದು ರೇಖಾ ಗುಪ್ತಾ ಸ್ಪಷ್ಟಪಡಿಸಿದರು.
ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.