ಸೆ.೧೩ರಂದು ಮುಧೋಳ ನಗರಕ್ಕೆ ನಟ ರಮೇಶ್ ಅರವಿಂದ್
ಬಾಗಲಕೋಟೆ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಪ್ರತಿಷ್ಠಿತ ರಾಯಲ್ ಸ್ಕೂಲ್ನಲ್ಲಿ ಸೆಪ್ಟೆಂಬರ್ 13ರಂದು ನಡೆಯಲಿರುವ ವಿಶೇಷ ಅಭಿನಂದನಾ ಸಮಾರಂಭಕ್ಕೆ ಖ್ಯಾತ ಬಹುಭಾಷಾ ನಟ, ನಿರ್ದೇಶಕ ಹಾಗೂ ನಿರೂಪಕರಾದ ರಮೇಶ್ ಅರವಿಂದ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ರ
ರಮೇಶ್


ಬಾಗಲಕೋಟೆ, 08 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಪ್ರತಿಷ್ಠಿತ ರಾಯಲ್ ಸ್ಕೂಲ್ನಲ್ಲಿ ಸೆಪ್ಟೆಂಬರ್ 13ರಂದು ನಡೆಯಲಿರುವ ವಿಶೇಷ ಅಭಿನಂದನಾ ಸಮಾರಂಭಕ್ಕೆ ಖ್ಯಾತ ಬಹುಭಾಷಾ ನಟ, ನಿರ್ದೇಶಕ ಹಾಗೂ ನಿರೂಪಕರಾದ ರಮೇಶ್ ಅರವಿಂದ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ರಾಯಲ್ ಸ್ಕೂಲ್ಗೆ ಇತ್ತೀಚೆಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರ ಸಹಯೋಗದಲ್ಲಿ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ. ಸೆ.13ರಂದು ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ರಮೇಶ್ ಅರವಿಂದ್ ಅವರು ಪಾಲ್ಗೊಂಡು ಶಾಲೆಯ ಸಾಧನೆಗೆ ಅಭಿನಂದನೆ ಸಲ್ಲಿಸಲಿದ್ದಾರೆ.

ಈ ಕುರಿತು ಮಾತನಾಡಿರುವ ರಮೇಶ್ ಅರವಿಂದ್ ಅವರು, “ಸೆಪ್ಟೆಂಬರ್ 13ರಂದು ನಾನು ಮುಧೋಳ ಪಟ್ಟಣಕ್ಕೆ ಬರುತ್ತಿದ್ದೇನೆ. ರಾಯಲ್ ಸ್ಕೂಲ್ನಲ್ಲಿ ನಡೆಯಲಿರುವ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಸಂತೋಷವಾಗುತ್ತಿದೆ. ತಾವೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಸಾರ್ವಜನಿಕರು, ವಿದ್ಯಾರ್ಥಿಗಳು, ಪಾಲಕರು ಹಾಗೂ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ರಮೇಶ್ ಅರವಿಂದ್ ಅವರು ನಟನೆಯ ಜೊತೆಗೆ ನಿರ್ದೇಶನ, ನಿರೂಪಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ವಿಶೇಷವಾಗಿ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದ ಮೂಲಕ ರಾಜ್ಯದ ಜನರಿಗೆ ಮತ್ತಷ್ಟು ಹತ್ತಿರವಾಗಿರುವ ಅವರು, ನಾಡಿನ ವಿವಿಧ ಕ್ಷೇತ್ರಗಳ ಸಾಧಕರ ಜೀವನ ಹಾಗೂ ಸಾಧನೆಗಳನ್ನು ಜನರಿಗೆ ಪರಿಚಯಿಸುವ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದಾರೆ.

ರಮೇಶ್ ಅರವಿಂದ್ ಅವರ ಆಗಮನದ ಹಿನ್ನೆಲೆಯಲ್ಲಿ ಮುಧೋಳ ನಗರದ ಸಾರ್ವಜನಿಕರು, ವಿದ್ಯಾರ್ಥಿಗಳು, ಯುವಕರು ಹಾಗೂ ಅಭಿಮಾನಿಗಳಲ್ಲಿ ಈಗಾಗಲೇ ಉತ್ಸಾಹ ಮನೆಮಾಡಿದೆ. ಕಾರ್ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದ್ದು, ಶಾಲೆಯ ಸಾಧನೆ ಮತ್ತು ಶೈಕ್ಷಣಿಕ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಲಿದ್ದಾರೆ.

ರಾಯಲ್ ಸ್ಕೂಲ್ಗೆ ದೊರೆತಿರುವ ಪ್ರಶಸ್ತಿಯ ಸಂಭ್ರಮವನ್ನು ಹಂಚಿಕೊಳ್ಳುವ ಉದ್ದೇಶದಿಂದ ಆಯೋಜಿಸಿರುವ ಈ ಅಭಿನಂದನಾ ಸಮಾರಂಭವು ಶಾಲಾ ಕುಟುಂಬಕ್ಕೆ ವಿಶೇಷ ಕ್ಷಣವಾಗಲಿದೆ. ಗಣ್ಯರು, ಶಿಕ್ಷಣ ಕ್ಷೇತ್ರದ ಪ್ರಮುಖರು, ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande