
ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ :
ಬಿಜೆಪಿಯ ‘ಲಿಂಗಸೂಗೂರು–ಬಳ್ಳಾರಿ’ ಪಾದಯಾತ್ರೆಯ ಸಮಾರೋಪ ಸಮಾರಂಭವನ್ನು ಬಳ್ಳಾರಿಯ ಮುನಿಸಿಪಲ್ ಮೈದಾನದಲ್ಲಿ ನಡೆಸಲು ಜಿಲ್ಲಾಡಳಿತ ಕೊನೆಗೂ ಅನುಮತಿ ನೀಡಿದೆ.
ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ನೇತೃತ್ವದಲ್ಲಿ ಗಡಿಗೆ ಚನ್ನಪ್ಪ ವೃತ್ತದಲ್ಲಿ ಮಂಗಳವಾರ ಸಂಜೆ 4 ಗಂಟೆಗೆ ಬಿಜೆಪಿ ತುರ್ತು ಸಭೆ ಕರೆದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಅವರು ಬಿಜೆಪಿ ಮುಖಂಡರೊಂದಿಗೆ ಸಂಜೆ 3.30ಕ್ಕೆ ಸೌಹಾರ್ದಯುತ ಸಭೆ ನಡೆಸಿದರು.
ಸಭೆಯಲ್ಲಿ ಮುನಿಸಿಪಲ್ ಮೈದಾನದಲ್ಲಿ ಸಮಾರೋಪ ಸಭೆ ನಡೆಸಲು ಜಿಲ್ಲಾಡಳಿತ ಒಪ್ಪಿಗೆ ನೀಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅನುಮತಿ ದೊರೆತ ಹಿನ್ನೆಲೆಯಲ್ಲಿ ಬಿಜೆಪಿ ತುರ್ತು ಸಭೆಯನ್ನು ರದ್ದುಗೊಳಿಸಿ ವಿಜಯೋತ್ಸವ ಆಚರಿಸಿತು. ಜಿಲ್ಲಾಡಳಿತ ತಮ್ಮ ಬೇಡಿಕೆಗೆ ಸ್ಪಂದಿಸಿರುವುದಕ್ಕೆ ಬಿಜೆಪಿ ಮುಖಂಡರು ಸಂತಸ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್