ಬಿಮ್ಸ್ನಲ್ಲಿ ನವಜಾತ ಶಿಶುಗಳ ಸಾವು: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್)ನಲ್ಲಿ ನವಜಾತ ಶಿಶುಗಳ ಸರಣಿ ಸಾವಿನ ಕುರಿತು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಬಿಮ್ಸ್‌ನಲ್ಲಿ ತಿಂಗಳ
ಅಶೋಕ ಸಂಗ್ರಹ ಚಿತ್ರ


ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್)ನಲ್ಲಿ ನವಜಾತ ಶಿಶುಗಳ ಸರಣಿ ಸಾವಿನ ಕುರಿತು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಬಿಮ್ಸ್‌ನಲ್ಲಿ ತಿಂಗಳಿಗೆ ಸುಮಾರು 20 ನವಜಾತ ಶಿಶುಗಳು ಸಾವನ್ನಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರೇ ಕಳವಳ ವ್ಯಕ್ತಪಡಿಸಿರುವಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಎಸ್. ಪ್ರಕಾಶ್ ಪಾಟೀಲ್ ಅವರು ಈ ಬಗ್ಗೆ ಗಮನ ಹರಿಸದಿರುವುದು ಖಂಡನೀಯ ಎಂದಿದ್ದಾರೆ.

ಬಿಮ್ಸ್‌ನಲ್ಲಿ ವೆಂಟಿಲೇಟರ್, ಹಾಸಿಗೆ, ಸೋಂಕು ನಿಯಂತ್ರಣ ವ್ಯವಸ್ಥೆ ಹಾಗೂ ನವಜಾತ ಶಿಶುಗಳ ತುರ್ತು ನಿಗಾ ಘಟಕದ (ಎನ್‌ಐಸಿಯು) ಕೊರತೆಗಳೇ ಸಾವಿಗೆ ಕಾರಣವಾಗುತ್ತಿವೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಗಂಡು-ಹೆಣ್ಣು ಮಕ್ಕಳ ಜನನ ಪ್ರಮಾಣದಲ್ಲಿ 60:40ರಷ್ಟು ವ್ಯತ್ಯಾಸವಿದೆ ಎಂದು ಉಲ್ಲೇಖಿಸಿರುವ ಅಶೋಕ್, ಅಕ್ರಮ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿದೆಯೇ ಎಂಬ ಆತಂಕ ಮೂಡಿದೆ. ಆಸ್ಪತ್ರೆಗಳು ಹಾಗೂ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಔಷಧ, ವೈದ್ಯಕೀಯ ಉಪಕರಣ ಹಾಗೂ ಮೂಲಸೌಕರ್ಯ ಒದಗಿಸದೆ ಬಡವರ ಮಕ್ಕಳ ಜೀವದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿರುವ ಅವರು, ಬಿಮ್ಸ್‌ನಲ್ಲಿನ ಶಿಶು ಸಾವುಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಅಗತ್ಯ ವೈದ್ಯಕೀಯ ಮೂಲಸೌಕರ್ಯಗಳನ್ನು ತುರ್ತಾಗಿ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಡವರ ಕಂದಮ್ಮಗಳ ಜೀವ ರಕ್ಷಿಸಲು ಸರ್ಕಾರ ವಿಫಲವಾದರೆ ವೈದ್ಯಕೀಯ ಶಿಕ್ಷಣ ಸಚಿವರು ರಾಜೀನಾಮೆ ನೀಡಿ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande